ETV Bharat / bharat

ಗುದನಾಳದಲ್ಲಿ ಚಿನ್ನ ಸಾಗಾಟ.. ಜೈಪುರ ವಿಮಾನ ನಿಲ್ದಾಣದಲ್ಲಿ 791ಗ್ರಾಂ ಬಂಗಾರ ಅಧಿಕಾರಿಗಳ ವಶಕ್ಕೆ!

ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 791 ಗ್ರಾಂ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..

Gold worth Rs 42 lakh recovered from smuggler in Jaipur Airport
ಅಕ್ರಮ ಚಿನ್ನ ಸಾಗಾಟ ಪ್ರಕರಣ
author img

By

Published : Apr 23, 2022, 8:55 AM IST

ಜೈಪುರ (ರಾಜಸ್ಥಾನ) : ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರದಂದು ಪೇಸ್ಟ್ ರೂಪದಲ್ಲಿದ್ದ ಅಕ್ರಮ ಸಾಗಣೆ ಮಾಡುತ್ತಿದ್ದ 791 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಾರ್ಜಾದಿಂದ ಏರ್ ಅರೇಬಿಯಾ ವಿಮಾನದ ಮೂಲಕ ಜೈಪುರಕ್ಕೆ ಆಗಮಿಸಿದ್ದ ಪ್ರಯಾಣಿಕನ ಮಾಹಿತಿ ಪ್ರಕಾರ ಈ ಚಿನ್ನದ ಪ್ರಸ್ತುತ ಮಾರುಕಟ್ಟೆ ಮೌಲ್ಯ 42,79,310 ರೂ. ಇದೆ. ಚಿನ್ನವನ್ನು ಮೂರು ಕ್ಯಾಪ್ಸುಲ್‌ಗಳಲ್ಲಿ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಇದನ್ನೂ ಓದಿ: 90ನೇ ವಯಸ್ಸಿನಲ್ಲಿ ಬ್ಯುಸಿನೆಸ್​ ಆರಂಭಿಸಿದ ವೃದ್ಧೆ, ತಿಂಗಳಿಗೆ ಲಕ್ಷಗಟ್ಟಲೆ ಸಂಪಾದನೆ

ಬೆಳಿಗ್ಗೆ 5:15ಕ್ಕೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ. ಗುದನಾಳದೊಳಗೆ ಕ್ಯಾಪ್ಸುಲ್​ಗಳಲ್ಲಿ ಇಟ್ಟ ಪೇಸ್ಟ್ ರೂಪದ ಚಿನ್ನವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಚಿನ್ನ ಸಹಿತ ಪ್ರಯಾಣಿಕನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.