ಮಲಪ್ಪುರಂ(ಕೇರಳ): ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಸ್ಟಮ್ಸ್ ಅಧಿಕಾರಿಗಳು 54.19 ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಸುಮಾರು 1,047 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಚಿನ್ನವನ್ನು ಪ್ರಯಾಣಿಕರು 7 ಕ್ಯಾಪ್ಸುಲ್ ಆಕಾರದಲ್ಲಿ ತೆಗೆದುಕೊಂಡು ಬಂದಿದ್ದರು. ಆರೋಪಿಗಳನ್ನ ಪಾಲಕ್ಕಾಡ್ ಮತ್ತು ಕಾರವಾರ ಮೂಲದವರು ಎಂದು ಗುರುತಿಸಲಾಗಿದೆ. ಇವರ ವಿರುದ್ಧ 1962 ರ ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 110 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಸೆಪ್ಟೆಂಬರ್ 30 ರಂದು ಕರಿಪುರದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಎನ್ -95 ಮಾಸ್ಕ್ನಲ್ಲಿ 40 ಗ್ರಾಂ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಪ್ರಯಾಣಿಕನನ್ನು ಬಂಧಿಸಲಾಗಿತ್ತು.