ಶ್ರೀನಗರ: ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹರಿ ಸಿಂಗ್ ಹೈ ಸ್ಟ್ರೀಟ್ ಮಾರುಕಟ್ಟೆಯಲ್ಲಿನ ಆಭರಣ ಅಂಗಡಿಯ ಮೇಲೆ ದಾಳಿ ಮಾಡಿದ ಬಂದೂಕುಧಾರಿಗಳು ಆಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸತ್ಪಾಲ್ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಗುಂಡೇಟಿನಿಂದ ಸತ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಇಂದು ಸಂಜೆ ನಡೆದಿದೆ.
ಬಂದೂಕುಧಾರಿಗಳ ಪತ್ತೆಗಾಗಿ ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎನ್ನಲಾಗುತ್ತಿದೆ. ಹತ್ಯೆಯಿಂದ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.