ಗೊಂದಿಯಾ( ಮಹಾರಾಷ್ಟ್ರ): ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ. ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗುಡ್ಮಾ ಮತ್ತು ಗೊಂಡಿಯಾ ರೈಲು ನಿಲ್ದಾಣಗಳ ಮಧ್ಯೆ ನಡುರಾತ್ರಿ 1.20 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಆಗ್ನೇಯ ಮಧ್ಯ ರೈಲ್ವೆ (SECR) ಅಧಿಕಾರಿ ತಿಳಿಸಿದ್ದಾರೆ. ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ಗೆ ಎಸ್‌ಎಫ್ ಎಕ್ಸ್‌ಪ್ರೆಸ್ (20843)- ರೈಲನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಅದು ಮುಂದೆ ನಿಂತಿದ್ದ ಗೂಡ್ಸ್ ರೈಲಿನ ಬ್ರೇಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಎಸ್‌ಇಸಿಆರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ನಾಲ್ಕು ಚಕ್ರಗಳು ಹಳಿ ತಪ್ಪಿವೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿಲ್ಲ. ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಆತಂಕದಿಂದ ಬಳಲುತ್ತಿದ್ದ ಒಬ್ಬ ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಇಸಿಆರ್ ಅಧಿಕಾರಿಯೊಬ್ಬರು ಮಾಹಿತಿ ಕೊಟ್ಟರು.
ಮಾಹಿತಿ ಸಿಗುತ್ತಿದ್ದಂತೆ ವೈದ್ಯಕೀಯ ಪರಿಹಾರ ತಂಡ ಹಾಗೂ ರೈಲ್ವೆ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಬಂದು ಪರಿಹಾರ ಕಾರ್ಯಾಚರಣೆ ಕೈಗೊಂಡರು. ತಕ್ಷಣವೇ ರೈಲು ಸಂಚಾರಕ್ಕೆ ಮರುಸ್ಥಾಪನೆ ಕಾರ್ಯ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಉಗ್ರರ ಅಡಗುತಾಣ ದ್ವಂಸಗೊಳಿಸಿದ ಸೇನೆ.. ಭಯೋತ್ಪಾದಕರು ಎಸ್ಕೇಪ್, ಶಸ್ತ್ರಾಸ್ತ್ರ ವಶ