ಫತೇಹಾಬಾದ್ : ಮಾರುಕಟ್ಟೆಯಲ್ಲಿ ನೂರಾರು ಜನರ ಮುಂದೆಯೇ ಯುವಕನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮೂವರು ದೊಣ್ಣೆಯಿಂದ ಯುವಕನಿಗೆ ಹಿಗ್ಗಾಮುಗ್ಗ ಥಳಿಸುತ್ತಿದ್ದರೆ, ಮತ್ತೊಬ್ಬ ಅಲ್ಲೇ ಪಕ್ಕದಲ್ಲಿದ್ದ ಕಲ್ಲೊಂದನ್ನು ಎತ್ತಿ ಹಾಕಿದ್ದಾನೆ. ಹಾಡಗಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿದ್ದರೆ, ಸ್ಥಳದಲ್ಲಿದ್ದ ನೂರಾರು ಜನರು ಮೂಕ ಪ್ರೇಕ್ಷಕರಾಗಿದ್ದರು. ಹಲ್ಲೆಯ ದೃಶ್ಯ ಪಕ್ಕದ ಅಂಗಡಿಯೊಂದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೆಲ ಹೊತ್ತು ಯುವಕನಿಗೆ ಥಳಿಸಿದ ತಂಡ ಬಳಿಕ ಸ್ಥಳದಿಂದ ಪರಾರಿಯಾಗಿದೆ. ದುಷ್ಕರ್ಮಿಗಳು ತೆರಳಿದ ಮೇಲೆ ಧಾವಿಸಿ ಬಂದ ಸ್ಥಳೀಯರು ಯುವಕನನ್ನು ಫತೇಹಾಬಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.