ನವದೆಹಲಿ: 2021-22ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ ಮಾರ್ಚ್ 15ರವರೆಗೆ ವಿಸ್ತರಣೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಇನ್ಕಮ್ ಟ್ಯಾಕ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿ ಹೊಸ ಪ್ರಕಟಣೆ ಹೊರಡಿಸಿದೆ.
-
On consideration of difficulties reported by taxpayers/stakeholders due to Covid & in e-filing of Audit reports for AY 2021-22 under the IT Act, 1961, CBDT further extends due dates for filing of Audit reports & ITRs for AY 21-22. Circular No. 01/2022 dated 11.01.2022 issued. pic.twitter.com/2Ggata8Bq3
— Income Tax India (@IncomeTaxIndia) January 11, 2022 " class="align-text-top noRightClick twitterSection" data="
">On consideration of difficulties reported by taxpayers/stakeholders due to Covid & in e-filing of Audit reports for AY 2021-22 under the IT Act, 1961, CBDT further extends due dates for filing of Audit reports & ITRs for AY 21-22. Circular No. 01/2022 dated 11.01.2022 issued. pic.twitter.com/2Ggata8Bq3
— Income Tax India (@IncomeTaxIndia) January 11, 2022On consideration of difficulties reported by taxpayers/stakeholders due to Covid & in e-filing of Audit reports for AY 2021-22 under the IT Act, 1961, CBDT further extends due dates for filing of Audit reports & ITRs for AY 21-22. Circular No. 01/2022 dated 11.01.2022 issued. pic.twitter.com/2Ggata8Bq3
— Income Tax India (@IncomeTaxIndia) January 11, 2022
ಆದಾಯ ತೆರಿಗೆ ಸಲ್ಲಿಕೆ ಮಾಡಲು ಡಿಸೆಂಬರ್ 31ರವರೆಗೆ ಕೊನೆಯ ಗಡುವು ನೀಡಲಾಗಿತ್ತು. ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡ್ತಿದ್ದ ವೇಳೆ ಅನೇಕ ರೀತಿಯ ಸಮಸ್ಯೆ ಎದುರಾಗಿರುವ ಕಾರಣ ಈ ನಿರ್ಧಾರ ಕೈಗೊಂಡಿದೆ.
ಪ್ರಮುಖವಾಗಿ ವೆಬ್ಸೈಟ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವ ಕಾರಣ, ಲಕ್ಷಾಂತರ ಜನರು ಸಮಸ್ಯೆ ಎದುರಿಸಿದ್ದು, ದಿನಾಂಕ ವಿಸ್ತರಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: ಬಸ್ ಆಳ ಕಂದಕಕ್ಕೆ ಉರುಳದಂತೆ ತಡೆದ ಮರಗಳು; ಉತ್ತರಾಖಂಡದಲ್ಲಿ 18 ಪ್ರಯಾಣಿಕರು ಬಚಾವ್
ಈ ಹಿಂದೆ ಕೂಡ 2021ರ ಜುಲೈ 31 ಅಂತಿಮ ಗಡುವು ನೀಡಿದ್ದ ಕೇಂದ್ರ ಸರ್ಕಾರ ತದನಂತರ ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿತ್ತು.