ETV Bharat / bharat

ಕೋವಿಡ್ ವ್ಯಾಕ್ಸಿನ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ: ಕೇಂದ್ರದಿಂದ ಎಚ್ಚರಿಕೆ - ಕೊರೊನಾ ವ್ಯಾಕ್ಸಿನ್​ ಸುದ್ದಿ

Covid vaccines
Covid vaccines
author img

By

Published : Jan 25, 2021, 3:30 PM IST

Updated : Jan 25, 2021, 4:26 PM IST

15:27 January 25

ಸುಳ್ಳು ಸುದ್ದಿ ಹಬ್ಬಿಸುವವರಿಗೆ ಕೇಂದ್ರದಿಂದ ಖಡಕ್​ ವಾರ್ನಿಂಗ್​​

ನವದೆಹಲಿ: ಕೊರೊನಾ ವೈರಸ್​ಗೆ ದೇಶದಲ್ಲಿ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಆದರೆ ಈ ವ್ಯಾಕ್ಸಿನ್‌ಗಳ ಬಗ್ಗೆ ಕೆಲವರು ಸುಳ್ಳು, ಆಧಾರರಹಿತ ಸುದ್ದಿ ಹರಡುತ್ತಿದ್ದಾರೆ. ಅಂಥವರಿಗೆ ಕೇಂದ್ರ ಸರ್ಕಾರ ಇದೀಗ ಎಚ್ಚರಿಕೆಯ ಸಂದೇಶ ರವಾನಿಸಿದೆ.  

ಇದನ್ನೂ ಓದಿ: ಕೋವಿಡ್​ ಮಧ್ಯೆಯೂ ಯಶಸ್ವಿಯಾಗಿ ಚುನಾವಣೆ ನಡೆಸಿದ್ದು ಅಸಾಧಾರಣ ಸಾಧನೆ: ರಾಷ್ಟ್ರಪತಿ

ವ್ಯಾಕ್ಸಿನ್‌ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ ಈ ಬಗ್ಗೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.  

ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಜತೆಗೆ ಕೋವಿಡ್ ವ್ಯಾಕ್ಸಿನ್​ಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸುವಂತೆಯೂ ಅವರು ಮನವಿ ಮಾಡಿದ್ದಾರೆ. 

Last Updated : Jan 25, 2021, 4:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.