ನವದೆಹಲಿ: ಟೆಲಿಕಾಂ ಉಪಕರಣಗಳ ತಯಾರಿಕೆಗಾಗಿ 12,195 ಕೋಟಿ ರೂ.ಗಳ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ (ಪಿಎಲ್ಐ) ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವ ರವಿಶಂಕರ್ ಪ್ರಸಾದ್, ಭಾರತವನ್ನು ಉತ್ಪಾದನೆಯಲ್ಲಿ ಜಾಗತಿಕ ಶಕ್ತಿ ಕೇಂದ್ರವಾಗಿಸಲು ವ್ಯಾಪಾರಕ್ಕೆ ಸುಲಭವಾದ ವಾತಾವರಣವನ್ನು ಸರ್ಕಾರ ಸೃಷ್ಟಿಸಿದೆ ಎಂದು ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಯಿಂದ ದೇಶದಲ್ಲಿ ಟೆಲಿಕಾಂ ಉಪಕರಣಗಳ ಉತ್ಪಾದನೆಯು 2,44,200 ಕೋಟಿ ರೂ.ಗಳವರೆಗೆ ಹೆಚ್ಚಳವಾಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತದೆ ಎಂದು ಅವರು ಹೇಳಿದರು.
ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್ ಪಿಸಿಗಳ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರವು ಶೀಘ್ರದಲ್ಲೇ ಪಿಎಲ್ಐ ಯೋಜನೆಯನ್ನು ತರಲಿದೆ ಎಂದು ಅವರು ತಿಳಿಸಿದರು.