ETV Bharat / bharat

ಹಬ್ಬದ ಭರ್ಜರಿ ಗಿಫ್ಟ್​​.. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ: ಜುಲೈ 1ರಿಂದಲೇ ಪೂರ್ವಾನ್ವಯ

author img

By ETV Bharat Karnataka Team

Published : Oct 18, 2023, 4:16 PM IST

Updated : Oct 18, 2023, 5:12 PM IST

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ.

govt-hikes-da-by-4-percentage-points-for-central-govt-employees-pensioners
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ: ಜುಲೈ 1ರಿಂದಲೇ ಪೂರ್ವಾನ್ವಯ

ನವದೆಹಲಿ: ಕೇಂದ್ರದ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಬುಧವಾರ ಶೇ.4ರಷ್ಟು ಏರಿಕೆ ಮಾಡಿದೆ. ಇದು ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ತಿಳಿಸಿದ್ದಾರೆ. ಇದು ಲಕ್ಷಾಂತರ ಹಾಲಿ ನೌಕರರು ಹಾಗೂ ಪಿಂಚಿಣಿದಾರರಿಗೆ ಅನುಕೂಲವಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ನಡೆಯಿತು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈಗ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ, ಒಟ್ಟಾರೆ ಇದರ ಪ್ರಮಾಣ ಶೇ 46ರಷ್ಟಾಗಿದೆ. ಇದು ಜುಲೈ 1ರಿಂದ ಅನ್ವಯವಾಗಲಿದೆ. 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿ ಇದನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದರ ಅನುಕೂಲವನ್ನು 48.67 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪಡೆಯಲಿದ್ದಾರೆ.

ಇದನ್ನೂ ಓದಿ: ತನ್ನದೇ ನಿರ್ದೇಶಕರ ಕಂಪನಿಗಳಿಗೆ ಸಾಲ; ಐಸಿಐಸಿಐ ಬ್ಯಾಂಕ್​ಗೆ ₹12 ಕೋಟಿ ದಂಡ ವಿಧಿಸಿದ ಆರ್​ಬಿಐ

ರೈಲ್ವೆ ನೌಕರರಿಗೆ 78 ದಿನಗಳ ಬೋನಸ್​: ಮತ್ತೊಂದೆಡೆ, ರೈಲ್ವೆ ಇಲಾಖೆಯ ನೌಕರರಿಗೂ ಖುಷಿ ಸುದ್ದಿ ಕೊಟ್ಟಿದೆ. ರೈಲ್ವೆ ನೌಕರರಿಗೆ ತಮ್ಮ 78 ದಿನಗಳ ವೇತನಕ್ಕೆ ಸಮಾನವಾದ ಬೋನಸ್​ ಘೋಷಣೆ ಮಾಡಲಾಗಿದ್ದು, ಇದು 11.07 ಲಕ್ಷಕ್ಕೂ ಹೆಚ್ಚು ಗೆಜೆಟೆಡ್ ಅಲ್ಲದ ಸಿಬ್ಬಂದಿಗೆ ಅನುಕೂಲವಾಗಿದೆ. ಈ ಬೋನಸ್ ಪಾವತಿಯಿಂದ ಬೊಕ್ಕಸಕ್ಕೆ 1,968.87 ಕೋಟಿ ರೂಪಾಯಿ ಹೊರೆಯಾಗಲಿದೆ.

ಗೆಜೆಟೆಡ್​ ಅಲ್ಲದ ಎಲ್ಲ ಅರ್ಹ ರೈಲ್ವೆ ಉದ್ಯೋಗಿಗಳಿಗೆ 2022-23ರ ಹಣಕಾಸು ವರ್ಷಕ್ಕೆ 78 ದಿನಗಳ ವೇತನಕ್ಕೆ ಸಮಾನವಾದ ಬೋನಸ್ ಸಚಿವ ಸಂಪುಟ ಅನುಮೋದಿಸಿದೆ. ರೈಲ್ವೆ ಸಿಬ್ಬಂದಿಯ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ, 11,07,346 ರೈಲ್ವೆ ನೌಕರರಿಗೆ 1,968.87 ಕೋಟಿ ರೂ.ಗಳ ಬೋನಸ್​ ಪ್ರಕಟಿಸಲಾಗಿದೆ. ಇದರ ಪ್ರಯೋಜನವನ್ನು ಆರ್‌ಪಿಎಫ್, ಆರ್‌ಪಿಎಸ್‌ಎಫ್ ಸಿಬ್ಬಂದಿಯನ್ನು ಹೊರತುಪಡಿಸಿ ಟ್ರ್ಯಾಕ್​ ನಿರ್ವಾಹಕರು, ಲೋಕೊ ಪೈಲಟ್‌ಗಳು, ರೈಲು ಗಾರ್ಡ್‌ಗಳು, ಸ್ಟೇಷನ್ ಮಾಸ್ಟರ್‌ಗಳು, ಮೇಲ್ವಿಚಾರಕರು, ಟೆಕ್ನಿಷಿಯನ್​ಗಳು, ಟೆಕ್ನಿಷಿಯನ್​ಗಳ ಸಹಾಯಕರು, ಪಾಯಿಂಟ್‌ಮನ್‌ಗಳು ಮತ್ತು ಸಚಿವಾಲಯದ ಸಿಬ್ಬಂದಿ ಹಾಗೂ ಇತರ ಗ್ರೂಪ್ 'ಸಿ' ಸಿಬ್ಬಂದಿ ಪಡೆಯಲಿದ್ದಾರೆ ಎಂದು ಸಚಿವ ಅನುರಾಗ್​ ತಿಳಿಸಿದರು.

2022-2023ನೇ ಸಾಲಿನಲ್ಲಿ ರೈಲ್ವೆಯ ಕಾರ್ಯಕ್ಷಮತೆ ಉತ್ತಮವಾಗಿದೆ. ರೈಲ್ವೆ ಇಲಾಖೆಯು 1,509 ಮಿಲಿಯನ್ ಟನ್​ಗಳಷ್ಟು ದಾಖಲೆಯ ಸರಕುಗಳನ್ನು ಲೋಡ್ ಮಾಡಿದೆ. ಸುಮಾರು 650 ಕೋಟಿ ಪ್ರಯಾಣಿಕರು ರೈಲುಗಳಲ್ಲಿ ಸಂಚರಿಸಿದ್ದಾರೆ. ಈಗ ಬೋನಸ್​ ಪಾವತಿಯಿಂದ ರೈಲ್ವೆ ಉದ್ಯೋಗಿಗಳು ತಮ್ಮ ಕಾರ್ಯಕ್ಷಮತೆಯನ್ನು ಮತ್ತಷ್ಟು ಸುಧಾರಿಸಿಕೊಂಡು ಕರ್ತವ್ಯ ನಿರ್ವಹಿಸಲು ಪ್ರೋತ್ಸಾಹಿಸುತ್ತದೆ ಎಂದು ರೈಲ್ವೆ ಇಲಾಖೆಯ ಮೂಲಗಳು ಹೇಳಿವೆ.

ಇದನ್ನೂ ಓದಿ: ಇನ್ನೂ 7 ದೇಶಗಳಿಗೆ ಬಾಸ್ಮತಿಯೇತರ ಅಕ್ಕಿ ರಫ್ತಿಗೆ ಅನುಮತಿ ನೀಡಿದ ಭಾರತ: ಹೀಗಿದೆ ಆ ದೇಶಗಳ ಪಟ್ಟಿ

Last Updated : Oct 18, 2023, 5:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.