ETV Bharat / bharat

ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ - ಉಜ್ವಲ ಯೋಜನೆ

LPG subsidy for Ujjwala Beneficiaries: ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಎಲ್​ಪಿಜಿ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಿದೆ.

Govt hikes LPG subsidy for Ujjwala beneficiaries to Rs 300 per cylinder
ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ
author img

By PTI

Published : Oct 4, 2023, 4:14 PM IST

Updated : Oct 4, 2023, 5:53 PM IST

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್​ಪಿಜಿ ಸಿಲಿಂಡರ್​ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್​ ಈ ಮಾಹಿತಿ ನೀಡಿದರು.

14.2 ಕೆಜಿಯ ಸಿಲಿಂಡರ್​ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 ರೂಪಾಯಿಗೆ ಲಭ್ಯವಾಗುತ್ತಿದೆ. ಈಗ 100 ರೂಪಾಯಿಗಳ ಸಬ್ಸಿಡಿ ಹೆಚ್ಚಿರುವುದರಿಂದ ಒಟ್ಟು 300 ರೂ. ಸಬ್ಸಿಡಿ ಸಿಗಲಿದ್ದು, ಗ್ಯಾಸ್​ ಸಿಲಿಂಡರ್​ 603 ರೂ.ಗೆ ಲಭ್ಯವಾಗಲಿದೆ.

ಹೆಚ್ಚುವರಿ ಸಂಪರ್ಕಕ್ಕೂ ಅನುಮೋದನೆ: ಉಜ್ವಲ ಯೋಜನೆಯಡಿ ಹೆಚ್ಚುವರಿಯಾಗಿ 75 ಲಕ್ಷ ಎಲ್‌ಪಿಜಿ ಸಂಪರ್ಕಗಳನ್ನು ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚುವರಿ ಎಲ್​ಪಿಜಿ ಸಂಪರ್ಕಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒದಗಿಸಲಾಗುವುದು. ಇದಕ್ಕೆ 1,650 ಕೋಟಿ ರೂಪಾಯಿಗಳ ವೆಚ್ಚವಾಗಲಿದೆ.

ಸಂಪುಟದ ಇತರ ಪ್ರಮುಖ ನಿರ್ಧಾರಗಳು: ಕೇಂದ್ರ ಸಂಪುಟದಲ್ಲಿ ಇತರ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಎರಡನೇ ನ್ಯಾಯಮಂಡಳಿ ರಚನೆಗೆ ಅನುಮೋದನೆ ನೀಡಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ವಿವಾದ ಸಂಬಂಧ ತೀರ್ಪು ನೀಡಲು ಅಂತರರಾಜ್ಯ ನದಿ ನೀರಿನ ವಿವಾದಗಳ ಕಾಯ್ದೆ 1956ರ ಅಡಿಯಲ್ಲಿ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-2ಕ್ಕೆ ಒಪ್ಪಿಗೆ ನೀಡಿದೆ.

ತೆಲಂಗಾಣದ ಬುಡಕಟ್ಟು ಕೇಂದ್ರೀಯ ವಿವಿಗೆ ಅನುಮೋದನೆ: ತೆಲಂಗಾಣ ರಾಜ್ಯದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೂ ಕೇಂದ್ರ ಸಂಪುಟ ಅಸ್ತು ಎಂದಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯ್ದೆ-2009ರ ತಿದ್ದುಪಡಿಗೆ ಅನುಮೋದಿಸಿದ್ದು, ಬುಡಕಟ್ಟು ವಿವಿಗಾಗಿ 889.07 ಕೋಟಿ ರೂ. ಅನುದಾನ ಒದಗಿಸಲು ನಿರ್ಧರಿಸಿದೆ.

ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪನೆಗೆ ಒಪ್ಪಿಗೆ: ಅರಿಶಿನ ಕುರಿತು ಜಾಗೃತಿ, ಅದರ ಬಳಕೆ ಮತ್ತು ರಫ್ತು ಹೆಚ್ಚಿಸಲು ಹಾಗೂ ಅಂತರರಾಷ್ಟ್ರೀಯವಾಗಿ ಹೊಸ ಮಾರುಕಟ್ಟೆಗಳನ್ನು ಸೃಷ್ಟಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಅರಿಶಿನ ಮಂಡಳಿಯ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದೆ.

ಈ ಮಂಡಳಿಯು ಹೊಸ ಉತ್ಪನ್ನಗಳ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. ಅರಿಶಿನ ರಫ್ತನ್ನು 1,600 ಕೋಟಿ ರೂ.ನಿಂದ 8,400 ಕೋಟಿ ರೂ.ಗೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ. 2030ರ ವೇಳೆಗೆ ಭಾರತದಿಂದ ಅರಿಶಿನ ರಫ್ತು ಒಂದು ಬಿಲಿಯನ್‌ ಡಾಲರ್​ಗೆ ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ.

ಇದನ್ನೂ ಓದಿ: ಹೆಚ್ಚಿದ ವಾಯುಪಡೆಯ 'ತೇಜಸ್​': ಎಚ್​ಎಎಲ್​ ನಿರ್ಮಿತ ಮೊದಲ ಲಘು ಯುದ್ಧ ವಿಮಾನ ಸೇನೆಗೆ ಹಸ್ತಾಂತರ

Last Updated : Oct 4, 2023, 5:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.