ಮುಂಬೈ: ಮಹಾಮಾರಿ ಕೊರೊನಾ ವೈರಸ್ ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರ ಇದೀಗ ಕೆಲ ಮಾರ್ಗಸೂಚಿಗಳೊಂದಿಗೆ ಮಹತ್ವದ ಆದೇಶ ಹೊರಹಾಕಿದೆ.
-
Govt of Maharashtra issues fresh measures applicable till 31st March 2021, in the wake of rise in #COVID19 cases here.
— ANI (@ANI) March 19, 2021 " class="align-text-top noRightClick twitterSection" data="
All drama theatres & auditoriums to operate on 50% capacity, no entry to be allowed without proper wearing of masks. All pvt offices to function at 50% capacity pic.twitter.com/HW73jiOjgg
">Govt of Maharashtra issues fresh measures applicable till 31st March 2021, in the wake of rise in #COVID19 cases here.
— ANI (@ANI) March 19, 2021
All drama theatres & auditoriums to operate on 50% capacity, no entry to be allowed without proper wearing of masks. All pvt offices to function at 50% capacity pic.twitter.com/HW73jiOjggGovt of Maharashtra issues fresh measures applicable till 31st March 2021, in the wake of rise in #COVID19 cases here.
— ANI (@ANI) March 19, 2021
All drama theatres & auditoriums to operate on 50% capacity, no entry to be allowed without proper wearing of masks. All pvt offices to function at 50% capacity pic.twitter.com/HW73jiOjgg
ಮಾರ್ಚ್ 31ರವರೆಗೆ ಈ ನಿಯಮ ಜಾರಿಗೊಳ್ಳಲಿದ್ದು, ಚಿತ್ರಮಂದಿರಗಳಲ್ಲಿ ಹಾಗೂ ಖಾಸಗಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಿದೆ. ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಗುಂಪುಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ತಿಳಿಸಿದೆ. ಪ್ರತಿಯೊಬ್ಬರೂ ಕೋವಿಡ್ ನಿಯಮ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.
ಈಗಾಗಲೇ ಪುಣೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ನಾಗ್ಪುರ್ದಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಕೋವಿಡ್ ಕೇಸ್ ಪತ್ತೆಯಾಗಿರುವುದು ಇದೀಗ ಮತ್ತಷ್ಟು ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.
ಪಂಜಾಬ್ನಲ್ಲೂ ಹೊಸ ನಿಯಮ ಜಾರಿ
ಪಂಜಾಬ್ನಲ್ಲೂ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಹೊಸ ನಿಯಮ ಜಾರಿಗೊಳಿಸಲಾಗಿದೆ. 11 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಚ್ 31ರವರೆಗೆ ಶಾಲೆ-ಕಾಲೇಜ್ಗಳು ಬಂದ್ ಇರಲಿವೆ. ಜತೆಗೆ ಸಿನಿಮಾ ಹಾಲ್ ,ಮಾಲ್ಗಳ ಮೇಲೂ ನಿಯಂತ್ರಣ ಹೇರಲಾಗಿದೆ.