ETV Bharat / bharat

ವಿಶ್ವದ ಮೊದಲ DNA ಲಸಿಕೆ: Zydus Cadila 3 ಡೋಸ್ ತುರ್ತು ಬಳಕೆಗೆ ಅನುಮೋದನೆ - ಜಗತ್ತಿನ ಮೊದಲ ಡಿಎನ್ಎ ಲಸಿಕೆ

ಸೂಜಿ ರಹಿತ ಲಸಿಕೆ ಆಗಿರುವ ಝೈಡಸ್ ಕ್ಯಾಡಿಲಾ ಸಂಸ್ಥೆಯ 3 ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಝೈಡಸ್ ಕ್ಯಾಡಿಲಾ
ಝೈಡಸ್ ಕ್ಯಾಡಿಲಾ
author img

By

Published : Aug 20, 2021, 9:11 PM IST

ನವದೆಹಲಿ: ಝೈಡಸ್ ಕ್ಯಾಡಿಲಾ ಸಂಸ್ಥೆಯ 3 ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತದ ಉನ್ನತ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಅನುಮೋದನೆ ನೀಡಿದೆ. ನೀಡಲ್ ಲೆಸ್ (ಸೂಜಿ ರಹಿತ) ಲಸಿಕೆ ಆಗಿರುವ ಮೂರು ಡೋಸ್ ಪ್ರಮಾಣದ ZyCov-D ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರ ಆರೋಗ್ಯ ತಜ್ಞರು ಶಿಫಾರಸು ಮಾಡಿದ್ದ ಹಿನ್ನೆಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅದರಂತೆ ಕೊರೊನಾ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಲಸಿಕಾಕರಣ ಕಾರ್ಯಕ್ರಮಕ್ಕೆ ಇದೀಗ ಮತ್ತೊಂದು ಲಸಿಕೆ ಸೇರ್ಪಡೆಯಾದಂತಾಗಿದೆ.

ಜಗತ್ತಿನ ಮೊದಲ ಡಿಎನ್ಎ ಲಸಿಕೆ

ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಝೈಕೋವ್ - ಡಿ ವಿಶ್ವದ ಮೊದಲ ಡಿಎನ್ಎ ಲಸಿಕೆಯಾಗಿದೆ. ಈಗಾಗಲೇ ದೇಶದಲ್ಲಿ ಸೀರಂ ಇನ್ಸ್​ಟಿಟ್ಯೂಟ್​​ನ ಕೋವಿಶೀಲ್ಡ್, ಭಾರತ್ ಬಯೋಟೆಕ್​​ನ ಕೊವಾಕ್ಸಿನ್, ರಷ್ಯಾದ ಸ್ಪುಟ್ನಿಕ್ -ವಿ ಬಳಕೆಯಲ್ಲಿವೆ.

ಇವುಗಳ ಜತೆಗೆ ಅಮೆರಿಕದ ಮಾಡರ್ನಾ ಮತ್ತು ಜಾನ್ಸನ್ ಮತ್ತು ಜಾನ್ಸನ್ ಲಸಿಕೆಗಳು ತುರ್ತು ಬಳಕೆ ಅನುಮೋದನೆ ಪಡೆದಿವೆ. ಆ ಮೂಲಕ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ 6ನೇ ಲಸಿಕೆ ಎಂಬ ಕೀರ್ತಿಗೆ Zy CoV-D ಪಾತ್ರವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 1453 ಮಂದಿಗೆ ಕೋವಿಡ್ ಸೋಂಕು : 17 ಜನ ಸಾವು

ಜೆನೆರಿಕ್ ಫಾರ್ಮಾಸ್ಯುಟಿಕಲ್ ಕಂಪನಿಯಾಗಿರುವ ಕ್ಯಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್ (Cadila Health Care Limited) ಜುಲೈ 1 ರಂದು ZyCoV-D ಯ ತುರ್ತು ಬಳಕೆಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. 28 ಸಾವಿರ ಸ್ವಯಂಸೇವಕರ ಮೇಲೆ ನಡೆಸಿದ ಕೊನೆಯ ಹಂತದ ಪ್ರಯೋಗದ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಲಸಿಕೆಯ ಪರಿಣಾಮಕಾರಿತ್ವವು ಶೇ. 66.6 ರಷ್ಟಿದೆ ಎಂದು ಈ ವರದಿಯಿಂದ ತಿಳಿದು ಬಂದಿತ್ತು. ಕ್ಯಾಡಿಲಾ ಹೆಲ್ತ್‌ಕೇರ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶರ್ವಿಲ್ ಪಟೇಲ್ ಅವರ ಪ್ರಕಾರ ಈ ಲಸಿಕೆ 12 ರಿಂದ 18 ವಯಸ್ಸಿನವರಿಗೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.