ETV Bharat / bharat

ಇಂದಿನಿಂದ ಸಂಸತ್​​ನ ಮುಂಗಾರು ಅಧಿವೇಶನ ಆರಂಭ: ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರ ಸಜ್ಜು! - Prime Minister Narendra Modi

ಇಂದಿನಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿವಿಧ ವಿಷಯಗಳ ಕುರಿತು ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳಿಗೆ ತಮ್ಮ ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

Monsoon Session
ಇಂದಿನಿಂದ ಮುಂಗಾರು ಅಧಿವೇಶನ ಆರಂಭ
author img

By

Published : Jul 19, 2021, 7:14 AM IST

ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ, ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಕ್ರಮಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲು ಸಜ್ಜಾಗುತ್ತಿವೆ. ಹೀಗಾಗಿ, ಸರ್ಕಾರವು ವಿರೋಧ ಪಕ್ಷಗಳಿಗೆ ಪ್ರತ್ಯುತ್ತರ ನೀಡಲು ಸಜ್ಜಾಗಿದೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳಿಗೆ ತಮ್ಮ ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಜನರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪಕ್ಷಗಳು ಸೌಹಾರ್ದಯುತವಾಗಿ ಧ್ವನಿ ಎತ್ತಬೇಕು ಹಾಗೂ ಅದಕ್ಕೆ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು. ಅಂತಹ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅಧಿವೇಶನ ಸುಗಮವಾಗಿ ನಡೆಯಬೇಕು. ಜನಪ್ರತಿನಿಧಿಗಳು ನಿಜವಾಗಿಯೂ ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ಆದ್ದರಿಂದ ಸದನದ ಚರ್ಚೆಗಳಲ್ಲಿ ಅವರ ಭಾಗವಹಿಸುವಿಕೆಯಿಂದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇನ್ನಷ್ಟು ಉತ್ಕೃಷ್ಟವಾಗಿರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಂಗಳವಾರ ಪ್ರತಿಪಕ್ಷಗಳಿಗೆ ಕೋವಿಡ್​ ಮಾಹಿತಿ

ಕೋವಿಡ್ ಪರಿಸ್ಥಿತಿ ಕುರಿತು ಪ್ರತಿಪಕ್ಷ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಾಹಿತಿ ನೀಡಲಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಚರ್ಚೆಗಳು ಸದನದಲ್ಲೇ ಆಗಲಿ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಎಂ, ಸಿಪಿಐ, ಸಮಾಜವಾದಿ ಪಕ್ಷ ಮತ್ತು ಎಎಪಿ ಮುಂತಾದ ಪಕ್ಷಗಳು ಈ ವಿಚಾರವನ್ನು ವಿರೋಧಿಸಿದ್ದು, ಸರ್ಕಾರವು ಕೇವಲ ಮುಖಂಡರಿಗೆ ಮಾಹಿತಿ ನೀಡುವ ಬದಲು ಸದನದಲ್ಲಿ ಎಲ್ಲ ಸಂಸದರಿಗೆ ವಿವರಿಸಬೇಕು ಎಂದಿವೆ.

33 ಪಕ್ಷಗಳು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಪ್ರತಿಪಕ್ಷಗಳು ಪ್ರತ್ಯೇಕ ಸಭೆ ನಡೆಸಿದವು. ಸಂಸತ್ತಿನ ಉಭಯ ಸದನಗಳಲ್ಲಿ ಅನೇಕ ವಿರೋಧ ಪಕ್ಷಗಳು ರೈತರ ಸಮಸ್ಯೆಗಳ ವಿಚಾರ ಕುರಿತು ನಿಲುವಳಿ ಮಂಡನೆ ನೋಟಿಸ್​ಗೆ ಪ್ರತಿಪಕ್ಷಗಳು ಮುಂದಾಗಿವೆ. ಕಾಂಗ್ರೆಸ್, ಟಿಎಂಸಿ, ಎನ್‌ಸಿಪಿ, ಸಿಪಿಐ (ಎಂ), ಸಿಪಿಐ, ಐಯುಎಂಎಲ್, ಆರ್‌ಎಸ್‌ಪಿ ಮುಖಂಡರು ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ಆರ್‌ಎಸ್‌ಪಿ ಮುಖಂಡ ಎನ್‌ಕೆ ಪ್ರೇಮಚಂದ್ರನ್ ಹೇಳಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ನವೆಂಬರ್‌ನಿಂದ ರೈತ ಸಂಘ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವಂತೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: ಇಂದಿನಿಂದ ಎಸ್ಸೆಸ್ಸೆಲ್ಸಿ Exam: ಪರೀಕ್ಷಾರ್ಥಿಗಳಿಗೆ ಶುಭ ಕೋರಿದ ಸಿಎಂ ಬಿಎಸ್​​​ವೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.