ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು 'ಮಕ್ಕಳಿಗಾಗಿ ಪಿಎಂ ಕೇರ್ಸ್' ಪ್ರಯೋಜನಗಳನ್ನು ನಾಳೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ. ಮಾರ್ಚ್ 11, 2020ರಿಂದ ಫೆಬ್ರವರಿ 28, 2022 ರವರೆಗೆ ಕೊರೊನಾದಿಂದ ಅನಾಥರಾದ ಮಕ್ಕಳ ರಕ್ಷಣೆಗೆ ಸರ್ಕಾರವು ಕಳೆದ ವರ್ಷ ಮೇ 29ರಂದು ಉಪಕ್ರಮವನ್ನು ಪ್ರಾರಂಭಿಸಿತ್ತು.
ಶಾಲೆಗೆ ಹೋಗುವ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನಾಳೆ ವರ್ಗಾಯಿಸುತ್ತಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ಉಲ್ಲೇಖ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಮಕ್ಕಳ ಪಾಸ್‌ಬುಕ್ ಮತ್ತು ಆರೋಗ್ಯ ಕಾರ್ಡ್‌ಗಾಗಿ ಪಿಎಂ ಕೇರ್ಸ್ ಯೋಜನೆಯನ್ನು ಸಹ ಅವರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದೆ. ಈ ಕಾರ್ಯಕ್ರಮದಲ್ಲಿ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಚಿವರು, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.
23 ವರ್ಷ ತುಂಬಿದ ನಂತರ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವಿನೊಂದಿಗೆ ಮಕ್ಕಳಿಗೆ ವಸತಿ, ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮೂಲಕ ನಿರಂತರವಾದ ರೀತಿಯಲ್ಲಿ ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆಯನ್ನು ಖಚಿತಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಇದನ್ನೂ ಓದಿ: ಯುಪಿಯಲ್ಲಿ ಅಪಘಾತ, ಬೀದರ್ನ 7 ಮಂದಿ ಸಾವು: ಸಂತ್ರಸ್ತರ ನೆರವಿಗೆ ಸಿಎಂ ಯೋಗಿ ಜೊತೆ ಬೊಮ್ಮಾಯಿ ಮಾತುಕತೆ