ದುಮ್ಕಾ(ಜಾರ್ಖಂಡ್): ಕಾಮುಕ ಮೊಮ್ಮಗನೋರ್ವ ತನ್ನ ಸ್ವಂತ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಜಾರ್ಖಂಡ್ನ ದುಮ್ಕಾದಲ್ಲಿ ನಡೆದಿದೆ. ವೃದ್ಧೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಇಲ್ಲಿಯ ಫೂಲ್ ಜಾನೋ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ದುಮ್ಕಾ ಜಿಲ್ಲೆಯ ಟೋಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೊಂದು ನಾಚಿಕೆಡೇಗಿನ ದುಷ್ಕೃತ್ಯ ಬೆಳಕಿಗೆ ಬಂದಿದೆ. 25 ವರ್ಷದ ಯುವಕ ತನ್ನ ಅಜ್ಜಿಯ ಮೈಮೇಲೆರಗಿದ್ದಾನೆ. ದುಮ್ಕಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಕಲ್ ರಿಪೇರಿ ಅಂಗಡಿ ಇಟ್ಟುಕೊಂಡಿರವ ಆರೋಪಿ ನಿನ್ನೆ ಅಜ್ಜಿ ಮನೆಗೆ ಹೋಗಿದ್ದನಂತೆ. ಈ ಸಂದರ್ಭದಲ್ಲಿ ಮನೆಯಲ್ಲಿ ಅಜ್ಜಿ ಒಬ್ಬಳೇ ಇರುವುದನ್ನು ಗಮನಿಸಿದ ಆತ ತನ್ನ ಕಾಮದಾಸೆ ತೀರಿಸಿಕೊಂಡಿದ್ದಾನೆ. ಇದರ ಬೆನ್ನಲ್ಲೇ ಕುಟುಂಬಸ್ಥರಿಗೆ ಮಾಹಿತಿ ಗೊತ್ತಾಗಿದೆ. ಕೃತ್ಯದಿಂದ ಚಿಂತಾಜನಕ ಸ್ಥಿತಿ ತಲುಪಿರುವ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಕೈ ಜೋಡಿಸಿ ನಮಸ್ಕರಿಸಿ ಜನರ ಲೂಟಿ: ಖದೀಮರ ಕೈಗಳಿಗೆ ಬಿತ್ತು ಕೋಳ!
ಡಿಎಸ್ಪಿ ವಿಜಯ್ ಕುಮಾರ್ ಪ್ರತಿಕ್ರಿಯಿಸಿ, "ತನ್ನ ಅಜ್ಜಿಯ ಮೇಲೆ ಯುವಕ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ಮುಂದುವರೆದಿದೆ" ಎಂದರು. ಜಾರ್ಖಂಡ್ನ ದುಮ್ಕಾ ಪ್ರದೇಶದಲ್ಲಿ ಇಂತಹ ಪ್ರಕರಣಗಳು ಮೇಲಿಂದ ಮೇಲೆ ಬೆಳಕಿಗೆ ಬರುತ್ತಿವೆ. ಕಳೆದ ತಿಂಗಳು ಗೋಪಿಕಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12 ವರ್ಷದ ಯುವಕನೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ.