ನವದೆಹಲಿ: ರಾಜ್ಯಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದನ್ನು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರತಿಪಾದನೆ ಉಲ್ಲೇಖಿಸಿ,ಇದರ ಬಗ್ಗೆ ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಶಾಂತಾ ಛೆಟ್ರಿ ಈ ಸಂಬಂಧ ಮಾತನಾಡಿ, ಮೇಘಾಲಯದ ಹಿಂದೂಗಳಿಗೆ ಸಮುದಾಯದ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ಛೆಟ್ರಿ ಮಾತನಾಡಿ, ಸಮುದಾಯವು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬಹುಸಂಖ್ಯಾತರಾಗಿಲ್ಲದಿದ್ದರೆ ರಾಜ್ಯ ಸರ್ಕಾರಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಿರಾತಕ ವಿದ್ಯಾರ್ಥಿ: ಬಾತ್ರೂಂನಲ್ಲಿ ಮೊಬೈಲ್ ಇಟ್ಟು ಶಿಕ್ಷಕಿಯ ಖಾಸಗಿ ದೃಶ್ಯ ಚಿತ್ರೀಕರಣ
ಭಾರತದ ಸಂವಿಧಾನದ 29 ಮತ್ತು 30 ನೇ ವಿಧಿಯ ಪ್ರಕಾರ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಮೇಘಾಲಯ ಸರ್ಕಾರಕ್ಕೆ ತುರ್ತಾಗಿ ನಿರ್ದೇಶಿಸಲು ಗೃಹ ಸಚಿವರ ಗಮನ ಸೆಳೆಯುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಿದರೆ ಕೇಂದ್ರದ ಪ್ರಕಾರ ಸಂವಿಧಾನವು ಅಲ್ಪಸಂಖ್ಯಾತರಿಗೆ ನೀಡಿರುವ ಹಕ್ಕುಗಳಿಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಅವರಿಗೆ ಅವಕಾಶ ನೀಡಬೇಕು ಎಂದು ಇದೇ ವೇಳೆ ಹೇಳಿದರು.