ಶ್ರೀನಗರ, ಜಮ್ಮು ಕಾಶ್ಮೀರ: ಕಣಿವೆ ನಾಡಿನಲ್ಲಿ ಭಯೋತ್ಪಾದಕರ ಹಾವಳಿ ತೀವ್ರವಾಗುತ್ತಿದ್ದು, ಅಪರಿಚಿತ ಉಗ್ರರು ಸಿಆರ್ಪಿಎಫ್ ಬಂಕರ್ ಮೇಲೆ ಗ್ರೆನೇಡ್ ದಾಳಿ ನಡೆಸಲು ಯತ್ನಿಸಿ, ವಿಫಲರಾಗಿದ್ದಾರೆ.
ಶುಕ್ರವಾರ ರಾತ್ರಿ ಭಯೋತ್ಪಾದಕರು ಈ ಕೃತ್ಯ ನಡೆಸಿದ್ದು, ಶ್ರೀನಗರದ ನಾವಾ ಕರ್ದಾಲ್ ಪ್ರದೇಶದಲ್ಲಿರುವ ಸಿಆರ್ಪಿಎಫ್ ಬಂಕರ್ ಅನ್ನು ಗುರಿಯಾಗಿಸಿ, ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ಅವರು ಎಸೆದ ಗ್ರೆನೇಡ್ ಸಿಡಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ದರ್ಯಾಸ್ನ ಠಾಣೆಯ ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಭಯೋತ್ಪಾದಕರಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಪ್ರಿಯತಮೆಯ ಕೊಲ್ಲಲು ಯತ್ನ