ETV Bharat / bharat

ಈ ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ RT-PCR ವರದಿ, ಪರೀಕ್ಷೆ ಕಡ್ಡಾಯ - ಕೇಂದ್ರ ಆರೋಗ್ಯ ಸಚಿವಾಲಯ

ಕೋವಿಡ್​​ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೆಲ ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

Guidelines
Guidelines
author img

By

Published : Sep 3, 2021, 8:28 AM IST

ನವದೆಹಲಿ: ಜಾಗತಿಕವಾಗಿ ಸಾರ್ಸ್ ಕೋವ್ 2 ಹೊಸ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಟ್ಸ್ ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ, ಇಯು, ಇಂಗ್ಲೆಂಡ್​ನಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಆರ್​ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.

ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಟ್ಸ್ ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ​ನಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಇಲ್ಲಿಗೆ ಬಂದ ನಂತರವೂ ಆರ್​ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಲಸಿಕೆ ಒದಗಿಸಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ

ಪ್ರಯಾಣಿಕರು ಬೋರ್ಡಿಂಗ್​ಗೆ ಕನಿಷ್ಠ 72 ಗಂಟೆಗಳಿಗೆ ಮೊದಲು ಆರ್​ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟಿರಬೇಕು. ರೋಗ ಲಕ್ಷಣ ಇರುವ ಯಾವುದೇ ಪ್ರಯಾಣಿಕರಿಗೆ ವಿಮಾನ ಹತ್ತಲು ಅವಕಾಶವಿಲ್ಲ. ಅವರು ಭಾರತಕ್ಕೆ ಬಂದರೂ, ಇಲ್ಲಿನ ಆಡಳಿತ ಅವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.