ಅಹಮದಾಬಾದ್: ಗುಜರಾತ್ನ 81 ಪುರಸಭೆ, 31 ಜಿಲ್ಲಾ ಪಂಚಾಯತ್‌ಗಳು ಮತ್ತು 231 ತಾಲೂಕು ಪಂಚಾಯತ್‌ಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದಲ್ಲಿ ಎರಡು ಹಂತಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿತ್ತು. ಫೆ.21ರಂದು ಗುಜರಾತ್ನ ಅಹಮದಾಬಾದ್, ವಡೋದರಾ, ಸೂರತ್, ರಾಜ್‌ಕೋಟ್, ಭಾವನಗರ ಮತ್ತು ಜಾಮ್‌ನಗರ ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ 576ರ ಪೈಕಿ 483 ಸ್ಥಾನಗಳನ್ನು ಪಡೆದು ಬಿಜೆಪಿ ಗೆಲುವಿನ ನಗೆ ಬೀರಿದ್ದರೆ, ಕಾಂಗ್ರೆಸ್ 55 ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) 27 ಸ್ಥಾನಗಳನ್ನು ಪಡೆದಿತ್ತು.
ಇದನ್ನೂ ಓದಿ: ಇನ್ಸ್ಟಾದಲ್ಲಿ 'ವಿರಾಟ' ಪರ್ವ: ಸೋಷಿಯಲ್ ಮೀಡಿಯಾದಲ್ಲಿ ಟೀಂ ಇಂಡಿಯಾ ನಾಯಕನ ಹವಾ..
ಫೆ.28 ರಂದು ಪುರಸಭೆಗಳ 680 ವಾರ್ಡ್, ಜಿಲ್ಲಾ ಪಂಚಾಯತ್‌ಗಳ 980 ಹಾಗೂ ತಾಲೂಕು ಪಂಚಾಯತ್‌ಗಳ 8,474 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 8,235 ಸ್ಥಾನಗಳಿಗೆ ಬಿಜೆಪಿ 8,161 ಅಭ್ಯರ್ಥಿಗಳನ್ನು, ಕಾಂಗ್ರೆಸ್ 7,778 ಹಾಗೂ ಆಮ್ ಆದ್ಮಿ 2,090 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಪುರಸಭೆಯಲ್ಲಿ ಶೇ.58.82, ಜಿಲ್ಲಾ ಪಂಚಾಯತ್ನಲ್ಲಿ ಶೇ.65.80 ಹಾಗೂ ತಾಲೂಕು ಪಂಚಾಯತ್ನಲ್ಲಿ ಶೇ.66.60 ರಷ್ಟು ಮತದಾನವಾಗಿತ್ತು.