ETV Bharat / bharat

2017ರ 'ಆಜಾದಿ ಮಾರ್ಚ್'​ ಪ್ರಕರಣ: ಶಾಸಕ ಜಿಗ್ನೇಶ್ ಮೇವಾನಿಗೆ 3 ತಿಂಗಳ ಜೈಲು ಶಿಕ್ಷೆ - ಶಾಸಕ ಜಿಗ್ನೇಶ್ ಮೇವಾನಿಗೆ ಜೈಲು ಶಿಕ್ಷೆ

2017ರಲ್ಲಿ ನಡೆಸಲಾಗಿದ್ದ ಆಜಾದಿ ಮಾರ್ಚ್​​(ಮೆರವಣಿಗೆ) ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

Gujarat MLA Jignesh Mevani
Gujarat MLA Jignesh Mevani
author img

By

Published : May 5, 2022, 4:34 PM IST

ಮೆಹಸಾನಾ(ಗುಜರಾತ್​): 2017ರಲ್ಲಿ ಅನುಮತಿ ಇಲ್ಲದೇ ಆಜಾದಿ ಮೆರವಣಿಗೆ​ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಇತರ ಒಂಬತ್ತು ಮಂದಿ ದೋಷಿಗಳು ಎಂದು ಗುಜರಾತ್​ನ ಹೆಚ್ಚುವರಿ ಜ್ಯೂಡಿಸಿಯಲ್​ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ಮಹತ್ವದ ತೀರ್ಪು ಹೊರಡಿಸಿದೆ. ಇದರ ಜೊತೆಗೆ ಶಾಸಕ ಜಿಗ್ನೇಶ್ ಮೇವಾನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ಜೆಎ ಪರ್ಮಾರ್ ಈ ಆದೇಶ ಹೊರಡಿಸಿದ್ದು, ಶಾಸಕ ಜಿಗ್ನೇಶ್ ಮೇವಾನಿ, ಎನ್‌ಸಿಪಿ ಕಾರ್ಯಾಧ್ಯಕ್ಷೆ ರೇಷ್ಮಾ ಪಟೇಲ್ ಮತ್ತು ಜಿಗ್ನೇಶ್ ಮೇವಾನಿ ಅವರ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್‌ನ ಕೆಲವು ಸದಸ್ಯರು ಸೇರಿದಂತೆ ಒಂಬತ್ತು ಮಂದಿಯನ್ನು ಆರೋಪಿಗಳು ಎಂದು ಘೋಷಣೆ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 143ರ ಅಡಿ ಈ ತೀರ್ಪು ನೀಡಲಾಗಿದೆ. ನ್ಯಾಯಾಲಯ ಎಲ್ಲ ಅಪರಾಧಿಗಳಿಗೆ ತಲಾ ಒಂದು ಸಾವಿರ ರೂಪಾಯಿ ದಂಡ ವಿಧಿಸಿದೆ.

ಜುಲೈ 2017 ರಲ್ಲಿ ಅನುಮತಿಯಿಲ್ಲದೆ ಮೆಹಸಾನಾದಿಂದ ಬನಸ್ಕಾಂತ ಜಿಲ್ಲೆಯ ಧನೇರಾಗೆ 'ಆಜಾದಿ ಮಾರ್ಚ್​' ಹೆಸರಿನಲ್ಲಿ ಮೆರವಣಿಗೆ ನಡೆಸಲಾಗಿತ್ತು. ಹೀಗಾಗಿ, ಪೊಲೀಸರು ಜಿಗ್ನೇಶ್ ಮೇವಾನಿ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 143 ರ ಅಡಿ ಎಫ್ಐಆರ್ ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ಹೊರಹಾಕಿದೆ.

ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಪ್ರಕರಣವೊಂದಕ್ಕೆ ಅಸ್ಸೋಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಜಿಗ್ನೇಶ್ ಮೇವಾನಿ, ತದನಂತರ ಜಾಮೀನಿನ ಮೇಲೆ ಹೊರಬಂದಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.