ಪೂಂಚ್(ಜಮ್ಮು-ಕಾಶ್ಮೀರ): ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎರಡೇ ದಿನದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿ ಬಂದಿದೆ. ಪಾಕಿಸ್ತಾನದಿಂದ ಉಗ್ರರು ಭಾರತದೊಳಗೆ ನುಸುಳುತ್ತಿದ್ದಾರೆ ಎಂದು ಮಾಹಿತಿ ತಿಳಿದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಗೆ ಇಳಿದಿದ್ದು, ಉಗ್ರರ ಮೇಲೆ ಗುಂಡಿನ ದಾಳಿ ನಡೆಸಲಾಗುತ್ತಿದೆ.
ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಉಗ್ರರು ಒಳನುಸುಳುವಿಕೆ ನಡೆಸಿದ್ದು, ಸೇನೆ ಮತ್ತು ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುರನ್‌ಕೋಟೆಯ ಸಿಂದಾರಾ ಮತ್ತು ಮೈದಾನ್ ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿವೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಈ ಪ್ರದೇಶದಲ್ಲಿ ಒಳನುಸುಳಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಸದ್ಯದ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು.
ಇದನ್ನೂ ಓದಿ; Militants killed: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ