ರಜೌರಿ(ಜಮ್ಮು ಕಾಶ್ಮೀರ): ಕಣಿವೆನಾಡಿನಲ್ಲಿ ಗುಂಡಿನ ಕಾಳಗ ನಡೆಯುತ್ತಿದೆ. ಜಮ್ಮು ವಿಭಾಗದ ರಜೌರಿ ಜಿಲ್ಲೆಯ ಬರೋತೆ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಥಾನಾ ಮಂಡಿ ಪ್ರದೇಶದಲ್ಲಿ ಭದ್ರತಾ ಪಡೆಯ ಸೈನಿಕರು ದಾಳಿ ನಡೆಸಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದಾರೆ. ಮೂಲಗಳು ಹೇಳುವಂತೆ ಪೊಲೀಸರು ಮತ್ತು ಸೇನಾಪಡೆ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಉಗ್ರರು ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಸೇನೆಯು ಕೂಡಾ ಪ್ರತಿದಾಳಿ ನಡೆಸಿದೆ.
ಇತ್ತೀಚೆಗಷ್ಟೇ ಶ್ರೀನಗರದ ಚನಪೋರಾ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಓರ್ವ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು. ಉಗ್ರರು ಸಿಆರ್‌ಪಿಎಫ್‌ನ 29ನೇ ಬೆಟಾಲಿಯನ್ ಚೆಕ್‌ಪೋಸ್ಟ್ ಮೇಲೆ ಗ್ರೆನೇಡ್ ಎಸೆದಿದ್ದರು.
ಇದನ್ನೂ ಓದಿ: ಅಮೆರಿಕದ ಯುದ್ಧ ವಿಮಾನಕ್ಕೆ ಜೋಕಾಲಿ ಕಟ್ಟಿ ಆಟವಾಡಿದ ತಾಲಿಬಾನಿಗಳು- Video Viral