ETV Bharat / bharat

ಮದುವೆ ಮುಗಿಸಿ ಬರುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಮಹಿಳೆ ಮೇಲೆ ಗ್ಯಾಂಗ್‌ರೇಪ್! - ಗುಂಟೂರಿನಲ್ಲಿ ಗಂಡನೆದುರು ಮಹಿಳೆ ಮೇಲೆ ಗ್ಯಾಂಗ್​ರೇಪ್

ಮದುವೆ ಕಾರ್ಯಕ್ರಮ ಮುಗಿಸಿ, ಗಂಡನೊಂದಿಗೆ ಬೈಕ್‌ನಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿ ಚಿನ್ನಾಭರಣವನ್ನೂ ದೋಚಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

Guntur gang rape case
Guntur gang rape case
author img

By

Published : Sep 9, 2021, 6:54 PM IST

Updated : Sep 9, 2021, 7:32 PM IST

ಗುಂಟೂರು(ಆಂಧ್ರಪ್ರದೇಶ): ಸಂಬಂಧಿಕರ ಮನೆಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಗಂಡನೊಂದಿಗೆ ವಾಪಸ್ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಕಾಮುಕರ ತಂಡ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಂಟೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಮಹಿಳೆ ಮೇಲೆ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಘಟನೆಯ ವಿವರ

ಗುಂಟೂರಿನ ಮೇಡಕೊಂಡೂರು ಕ್ರಾಸ್​ ಬಳಿ ಈ ಘಟನೆ ನಡೆದಿದೆ. ಗುಂಟೂರಿನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಸತ್ತೇನಪಲ್ಲಿ ಮಂಡಲಕ್ಕೆ ದಂಪತಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಏಕಾಏಕಿ ಗಂಡನ ಮೇಲೆ ಹಲ್ಲೆ ನಡೆಸಿರುವ ಅವರು, ತದನಂತರ ಆತನ ಪತ್ನಿಯನ್ನು ಎಳೆದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಕೊರಳಲ್ಲಿದ್ದ ಚಿನ್ನಾಭರಣವನ್ನೂ ಬಿಡಲಿಲ್ಲ

ಅತ್ಯಂತ ಅಮಾನವೀಯವಾಗಿ ದುಷ್ಕೃತ್ಯವೆಸಗಿರುವ ಕಾಮುಕರು ಮಹಿಳೆಯ ಕೊರಳಲ್ಲಿದ್ದ ಚಿನ್ನಾಭರಣವನ್ನೂ ಬಿಡಲಿಲ್ಲ. ಇಷ್ಟು ಸಾಲದೆಂಬಂತೆ ಘಟನೆಯ ಬಗ್ಗೆ ಯಾರಿಗೂ ಮಾಹಿತಿ ನೀಡದಂತೆ ಪ್ರಾಣ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಆಘಾತಕ್ಕೊಳಗಾದ ದಂಪತಿ ಸತ್ತೇನಪಲ್ಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮಂದಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಅಲ್ಲಿನ ಪೊಲೀಸರು ಹಿಂದೇಟು ಹಾಕಿದ್ದಾರಂತೆ.

ಸತ್ತೇನಹಳ್ಳಿ ಪೊಲೀಸರ ನಡೆಯಿಂದ ಮತ್ತಷ್ಟು ನೊಂದ ದಂಪತಿ ಇಂದು ಮೆಡಿಕೊಂಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 394 ಮತ್ತು 342 ರ ಅಡಿಯಲ್ಲಿ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ವಿಷಯ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಗುಂಟೂರು ಡಿಎಸ್ಪಿ ಪ್ರಶಾಂತಿ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ 8 ಜನ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

Last Updated : Sep 9, 2021, 7:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.