ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯನ್ನು ರದ್ದತಿಯ 2ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಗುಪ್ಕರ್ ಮೈತ್ರಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ತುರ್ತು ಸಭೆ ನಡೆಸಿದೆ.
ವೇಳೆ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ನಾಯಕಾರದ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ, ಸಿಪಿಐ (ಎಂ) ಯೂಸಫ್ ತರಿಗಾಮಿ ಮತ್ತು ಅವಾಮಿ ನ್ಯಾಷನಲ್ ಕಾಂಗ್ರೆಸ್ ಹಿರಿಯ ನಾಯಕ ಮುಜಾಫರ್ ಶಾ ಸಹ ಭಾಗಿಯಾಗಿದ್ದರು.
ಸಭೆ ಬಳಿಕ ಮಾತನಾಡಿರುವ ಗುಪ್ಕರ್ ಮೈತ್ರಿ ವಕ್ತಾರ ಯೂಸಫ್ ತರಿಗಾಮಿ ಮಾತನಾಡಿ, ಆರ್ಟಿಕಲ್ 370 ರದ್ದತಿಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಹೇಳಿತ್ತು. ಆದರೆ ಇದೀಗ ವಿರುದ್ಧವಾಗಿದೆ ಎಂದಿದ್ದಾರೆ.
2019 ರ ಆಗಸ್ಟ್ 5 ರಂದು ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿರುವುದನ್ನು ನಾವಿಲ್ಲಿ ನೆನಪು ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಪಿಎಜಿಡಿ ಕಳೆದ ವರ್ಷದಿಂದ 370ನೇ ವಿಧಿಯ ಮರುಸ್ಥಾಪನೆಗಾಗಿ ಕೆಲಸ ಮಾಡುತ್ತಿದೆ. ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ (ಪಿಎಜಿಡಿ) ಜಮ್ಮು ಮತ್ತು ಕಾಶ್ಮೀರದ ಐದು ಪ್ರಾದೇಶಿಕ ರಾಜಕೀಯ ಪಕ್ಷಗಳ ನಡುವಿನ ಚುನಾವಣಾ ಮೈತ್ರಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜ್ಯದ ಆರ್ಟಿಕಲ್ 35ಎ ಜೊತೆಗೆ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವ ಗುರಿಯನ್ನು ಹೊಂದಿದೆ.