ಕೋಲ್ಕತ್ತಾ: ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಭಾರಿ ಅವಘಡ ಸಂಭವಿಸಿದ ಘಟನೆ ಇಂದು ಸಂಜೆ 5 ಗಂಟೆಯ ಸುಮಾರಿಗೆ ನಡೆದಿದೆ. ಈ ದುರ್ಘಟನೆಯಲ್ಲಿ ಸದ್ಯಕ್ಕೆ ಲಭ್ಯವಾದ ಮಾಹಿತಿ ಪ್ರಕಾರ, ಐವರು ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ.ಬಂಗಾಳದ ಡೊಮೊಹಾನಿ ಎಂಬಲ್ಲಿ ತೆರಳುತ್ತಿದ್ದಾಗ ರೈಲು ಹಳಿ ತಪ್ಪಿದ್ದು ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. ದುರ್ಘಟನೆಯಲ್ಲಿ 12 ಬೋಗಿಗಳು ಹಾನಿಗೀಡಾಗಿವೆ. ಘಟನೆಯ ಮಾಹಿತಿ ಪಡೆದ ಡಿಆರ್ಎಂ ಮತ್ತು ಎಡಿಆರ್ಎಂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ರೈಲಿನಡಿ ಹಲವರು ಸಿಲುಕಿದ್ದಾರೆ ಎನ್ನಲಾಗುತ್ತಿದೆ. ರಕ್ಷಣಾ ಪಡೆ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ:
ಇದೇ ವೇಳೆ, ದುರ್ಘಟನೆಯಿಂದ ತಕ್ಷಣ ಎಚ್ಚೆತ್ತುಕೊಂಡಿರುವ ರೈಲ್ವೇ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
-
Deeply concerned to hear about the tragic accident of the Bikaner-Guwahati Express in Maynaguri.
— Mamata Banerjee (@MamataOfficial) January 13, 2022 " class="align-text-top noRightClick twitterSection" data="
Senior Officers of the State Government, DM/SP/IG North Bengal are supervising rescue and relief operations. Those injured will receive medical attention, as early as possible.
">Deeply concerned to hear about the tragic accident of the Bikaner-Guwahati Express in Maynaguri.
— Mamata Banerjee (@MamataOfficial) January 13, 2022
Senior Officers of the State Government, DM/SP/IG North Bengal are supervising rescue and relief operations. Those injured will receive medical attention, as early as possible.Deeply concerned to hear about the tragic accident of the Bikaner-Guwahati Express in Maynaguri.
— Mamata Banerjee (@MamataOfficial) January 13, 2022
Senior Officers of the State Government, DM/SP/IG North Bengal are supervising rescue and relief operations. Those injured will receive medical attention, as early as possible.
ಸಿಎಂ ಮಮತಾ ಬ್ಯಾನರ್ಜಿ ಕಳವಳ
ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ದುರಂತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಘಟನೆಯಲ್ಲಿ ಗಾಯಗೊಂಡವರ ರಕ್ಷಣೆ ಮತ್ತು ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುವುದು ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ.
ಪರಿಹಾರ ಘೋಷಣೆ
ದುರಂತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಅಲ್ಲದೇ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 25 ಸಾವಿರ ರೂಪಾಯಿ ನೆರವು ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ.
ರೈಲು ಅಪಘಾತದ ಮೇಲೆ ನಿಗಾ ವಹಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಚರ್ಚಿಸಲಾಗಿದೆ. ರಕ್ಷಣಾ ಕಾರ್ಯ ಮತ್ತು ಪರಿಹಾರಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.