ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಯುವಕರಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಈ ಕೃತ್ಯವನ್ನು ನೇರಪ್ರಸಾರ(ಲೈವ್ ಸ್ಟ್ರೀಮ್) ಮಾಡಿ ಅದನ್ನು ತಮ್ಮ ಸ್ನೇಹಿತರಿಗೆ ರವಾನಿಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ತನ್ನನ್ನು ಹೋಟೆಲ್ಗೆ ಕರೆದೊಯ್ದ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದಾರೆ. ಅವರಿಬ್ಬರೂ 21 ವರ್ಷ ವಯಸ್ಸಿನವರಾಗಿದ್ದರು. ತನ್ನ ಮೇಲೆ ದೌರ್ಜನ್ಯ ಎಸಗಿದ್ದಲ್ಲದೇ, ಚಿತ್ರೀಕರಣ ಮಾಡಿ ತಮ್ಮ ಸ್ನೇಹಿತರಿಗೆ 'ಲೈವ್ ಸ್ಟ್ರೀಮ್' ಮಾಡಿದ್ದಾರೆ ಎಂದು ಸಂತ್ರಸ್ತೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದಾಳೆ.
ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಓದಿ: ಲೂಡೋ ಆಡುತ್ತಿದ್ದ ಮಗನ ಕೊಂದು ರಹಸ್ಯವಾಗಿ ಮಣ್ಣು ಮಾಡಿದ ತಂದೆ: ಕೃತ್ಯ ಬಾಯ್ಬಿಡದಂತೆ ಪತ್ನಿಗೂ ಬೆದರಿಕೆ!