ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮದ್ಯ ಸೇವನೆಯಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 10 ಕಿ.ಮೀ ದೂರದಲ್ಲಿರುವ ಮಹಾರಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಲಿಯಾದವರಲ್ಲಿ ಒಬ್ಬರು ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಸಾವನ್ನಪ್ಪಿದ್ದರೇ, ಇನ್ನೊಬ್ಬರು ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತರು ಜಯರೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರದೀಪ್ ಅಹಿವಾರ್ ಮತ್ತು ವಿಜಯ್ ಕೇಶವ್ ಮೃತರೆಂದು ಗುರುತಿಸಲಾಗಿದೆ.
ಓದಿ:ತಿರುಪತಿಗೆ ಹೋಗಿ ಮುಡಿ ಕೊಟ್ಟಿದ್ದಕ್ಕೆ ಕೆಲಸ ಕಳೆದುಕೊಂಡ ಊಬರ್ ಚಾಲಕ !
ಕುಡಿದ ನಂತರ ಅನಾರೋಗ್ಯಕ್ಕೆ ಒಳಗಾದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ನಕಲಿ ಮದ್ಯ ಸೇವನೆಯಿಂದ ಹೀಗೆ ಆಗಿರಬಹುದೆಂದು ಹೇಳಲಾಗುತ್ತಿದ್ದು, ವರದಿ ಬಂದ ಬಳಿಕವಷ್ಟೇ ಸತ್ಯ ತಿಳಿಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಹೋಳಿ ಹಬ್ಬದಂದು ಕೆಲವು ಯುವಕರು ಹಳ್ಳಿಯಲ್ಲಿ ಮದ್ಯ ತಂದಿದ್ದರು. ಈ ವೇಳೆ, ದುರ್ಘಟನೆ ನಡೆದಿದೆ ಎಂದು ಮಾಜಿ ಚಂದುಪುರ ಜನಪಾಡ್ (ಗ್ರಾಮೀಣ ನಾಗರಿಕ ಸಂಸ್ಥೆ) ಸದಸ್ಯ ಚೌಧರಿ ಜಬರ್ ಸಿಂಗ್ ಹೇಳಿದ್ದಾರೆ.