ETV Bharat / bharat

ಜ್ಞಾನವಾಪಿ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ - ಜ್ಞಾನವಾಪಿ ಮಸೀದಿ ಪ್ರಕರಣ

Gyanvapi Mosque Case: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ಐದು ಅರ್ಜಿಗಳ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು (ಮಂಗಳವಾರ) ತೀರ್ಪು ನೀಡುವ ಸಾಧ್ಯತೆಯಿದೆ.

Gyanvapi Mosque Case
ಜ್ಞಾನವಾಪಿ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ
author img

By ETV Bharat Karnataka Team

Published : Dec 19, 2023, 9:14 AM IST

ಪ್ರಯಾಗರಾಜ್: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ 5 ಅರ್ಜಿಗಳ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಡಿಸೆಂಬರ್ 8 ರಂದು ನಡೆಸಿದ್ದು, ತೀರ್ಪನ್ನು ಇಂದಿಗೆ(ಡಿ.19) ಕಾಯ್ದಿರಿಸಿತ್ತು. ಈ ಪೈಕಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿವೆ. ಎಎಸ್‌ಐ ಸರ್ವೆ ಆದೇಶದ ವಿರುದ್ಧ ಎರಡು ಅರ್ಜಿಗಳು ಸಲ್ಲಿಕೆಯಾಗಿದ್ದವು. 1991ರ ಈ ಪ್ರಕರಣದಲ್ಲಿ ವಿವಾದಿತ ನಿವೇಶನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂಬ ಬೇಡಿಕೆ ಇತ್ತು. ಇದಲ್ಲದೇ ಇಲ್ಲಿ ಪೂಜೆಗೆ ಅನುಮತಿಯನ್ನೂ ಕೋರಲಾಗಿತ್ತು.

ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದ ಐದು ಅರ್ಜಿಗಳಿಗೆ ತೀರ್ಪು: ವಾರಣಾಸಿಯ ಜಿಲ್ಲಾ ನ್ಯಾಯಾಲಯದಲ್ಲಿ 1991ರಲ್ಲಿ ಈ ಪ್ರಕರಣ ದಾಖಲಾಗಿತ್ತು. ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ನಿರ್ಧರಿಸಬೇಕಾದ ಪ್ರಮುಖ ವಿಷಯವೆಂದರೆ, ವಾರಣಾಸಿ ನ್ಯಾಯಾಲಯವು ಈ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದು ತಿಳಿಸಲಿದೆ. ಈ ಸಂದರ್ಭದಲ್ಲಿ 1991ರ ಪೂಜಾ ಸ್ಥಳಗಳ ಕಾಯಿದೆಯನ್ನು ಅನ್ವಯಿಸಬಹುದೇ ಅಥವಾ ಇಲ್ಲವೇ ಎನ್ನುವ ಕುರಿತು ಈ ಪ್ರಕರಣದ ತೀರ್ಪು ಅನ್ನು ಮೂರು ಬಾರಿ ಕಾಯ್ದಿರಿಸಿದ ನಂತರ, ನ್ಯಾಯಾಲಯವು ಮತ್ತೆ ಅರ್ಜಿಗಳನ್ನು ಆಲಿಸಿತ್ತು. ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ಹಿಂದೂ ಪಕ್ಷ ಮತ್ತು ಅಂಜುಮನ್ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ್ದವು.

1936ರ ದೀನ್ ಮೊಹಮ್ಮದ್ ಪ್ರಕರಣದ ತೀರ್ಪಿನ ಬಗ್ಗೆ ಮುಸ್ಲಿಂ ಕಡೆಯಿಂದ ನ್ಯಾಯಾಲಯದಲ್ಲಿ ಮಾಹಿತಿ ನೀಡಲಾಗಿದೆ. ಮೂರು ಬಾರಿ ತೀರ್ಪನ್ನು ಕಾಯ್ದಿರಿಸಿದ ನಂತರ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮತ್ತೊಮ್ಮೆ ನಡೆಸಿತು. ಇತ್ತೀಚೆಗಷ್ಟೇ ಜ್ಞಾನವಾಪಿ ಸಂಕಿರ್ಣದಲ್ಲಿ ಎಎಸ್‌ಐ ಸಮೀಕ್ಷೆ ನಡೆಸಿತ್ತು. ಸಮೀಕ್ಷೆ ಮುಗಿದರೂ ನ್ಯಾಯಾಲಯಕ್ಕೆ ಇನ್ನೂ ವರದಿ ಸಲ್ಲಿಸಿಲ್ಲ. ಈ ಪ್ರಕರಣದಲ್ಲಿ ವರದಿ ಸಲ್ಲಿಸಲು ಸಮೀಕ್ಷಾ ತಂಡ ನ್ಯಾಯಾಲಯದಿಂದ ಕಾಲಾವಕಾಶ ಕೋರಿತ್ತು.

ಏನಿದು ಪ್ರಕರಣ?: ಜುಲೈ 21ರಂದು ವಾರಣಾಸಿ ಕೋರ್ಟ್​, ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಲಾಗಿತ್ತು. ಅದರಂತೆ ಮಸೀದಿಯಲ್ಲಿ ಐಎಸ್‌ಐ ಜುಲೈ 24ರಂದು ಸಮೀಕ್ಷೆ ಪ್ರಾರಂಭಿಸಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಮುಸ್ಲಿಂ ಅರ್ಜಿದಾರರು ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು. ಅದರಂತೆ ಅಂಜುಮನ್‌ ಇಂತೇಜಾಮಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್‌ ಹೈಕೋರ್ಟ್‌, ಸಮೀಕ್ಷೆಗೆ ತಾತ್ಕಾಲಿಕವಾಗಿ ತಡೆಯಾಜ್ಞೆ ಕೊಟ್ಟಿತ್ತು. ನಂತರ, ಅಲಹಾಬಾದ್‌ ಹೈಕೋರ್ಟ್‌ ಸಮೀಕ್ಷೆಗೆ ಅನುಮತಿ ಕೊಟ್ಟಿತ್ತು. ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ, ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಅಂತಿಮವಾಗಿ, ಸುಪ್ರೀಂ ಕೋರ್ಟ್‌ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ಕೊಟ್ಟಿತ್ತು.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿ ಹಿಂದೂ ಮಹಿಳೆಯರು 2021ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ಸಲ್ಲಿಸಿದ ನಂತರ ನ್ಯಾಯಾಲಯವು ಮಸೀದಿಯಲ್ಲಿ ವಿಡಿಯೋ ಸಮೀಕ್ಷೆಗೆ ಅನುಮತಿ ನೀಡಿತ್ತು. ಈಗಾಗಲೇ, ಜ್ಞಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ಮುಗಿದಿತ್ತು. ಸಮೀಕ್ಷೆ ಸಮಯದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಶಿವಲಿಂಗ ಪತ್ತೆಯಾದ ಕಾರಣ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಲಾಗಿತ್ತು. ಜೊತೆಗೆ ವೈಜ್ಞಾನಿಕ ಸಮೀಕ್ಷೆಯು ಮುಗಿದಿದೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.