ETV Bharat / bharat

Gyanvapi Survey: ಗ್ಯಾನವಾಪಿ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್​ ತಡೆ; ಜು.25ರವರೆಗೆ ಯಥಾಸ್ಥಿತಿಗೆ ಆದೇಶ - ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್

Gyanvapi Survey: ಗ್ಯಾನವಾಪಿ ಮಸೀದಿಯ ಸಮೀಕ್ಷೆ ವಿಚಾರದಲ್ಲಿ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

Gyanvapi row: SC stays ASI survey order till July 25 to enable

author img

By

Published : Jul 24, 2023, 1:30 PM IST

ನವದೆಹಲಿ : ಜ್ಞಾನವಾಪಿ ಮಸೀದಿಯ ವ್ಯಾಪಕ ಸಮೀಕ್ಷೆಗೆ ಅನುಮತಿ ನೀಡಿ ಜುಲೈ 21ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜುಲೈ 26ರಂದು ಸಂಜೆ 5 ಗಂಟೆಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಜ್ಞಾನವಾಪಿ ಮಸೀದಿಯ ವ್ಯಾಪಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಹಿಂದೂ ದೇವಸ್ಥಾನದ ಮೇಲೆ ಮಸೀದಿ ಕಟ್ಟಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಮೀಕ್ಷೆ ನಡೆಯುತ್ತಿದೆ. ಸತ್ಯ ಸಂಗತಿಗಳು ಹೊರಬರಬೇಕಾದರೆ ವೈಜ್ಞಾನಿಕ ತನಿಖೆ ಅಗತ್ಯ ಎಂದು ಜಿಲ್ಲಾ ನ್ಯಾಯಾಲಯ ಹೇಳಿತ್ತು.

  • #WATCH | Hari Shankar Jain, counsel for the Hindu side, after SC stays ASI survey of the Gyanvapi mosque complex till 5pm July 26 says, "This order should not be looked at as a stay on the ASI survey of mosque premises. SC has given the Muslim side chance to approach the High… pic.twitter.com/lsHKlKG2Gs

    — ANI (@ANI) July 24, 2023 " class="align-text-top noRightClick twitterSection" data=" ">

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, ಅವರಿಗೆ ಮೇಲ್ಮನವಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ನಾವು ಭಾವಿಸುತ್ತೇವೆ ಎಂದು ಹೇಳಿತು. ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಕಡೆಯವರು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಬಹುದು ಮತ್ತು ಜುಲೈ 26 ರ ಸಂಜೆ 5 ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತು.

ವುಜುಖಾನಾವನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ಕೋರಿದ್ದ ಹಿಂದೂ ಮಹಿಳಾ ಅರ್ಜಿದಾರರ ಅರ್ಜಿಗೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದ ಕ್ರಮವನ್ನು ಪ್ರಶ್ನಿಸಿ ಹಿರಿಯ ವಕೀಲ ಹುಝೆಫಾ ಅಹ್ಮದಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಅಹ್ಮದಿ ತೀವ್ರವಾಗಿ ಒತ್ತಾಯಿಸಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಲ್ಲಿನ ಒಂದು ಇಟ್ಟಿಗೆಯನ್ನು ಕೂಡ ತೆಗೆದಿಲ್ಲ ಅಥವಾ ಕನಿಷ್ಠ ಒಂದು ವಾರದವರೆಗೆ ಹಾಗೆ ಮಾಡುವ ಯಾವುದೇ ಉದ್ದೇಶವಿಲ್ಲ. ಇದೀಗ ಕೇವಲ ಮಾಪನ, ಛಾಯಾಗ್ರಹಣ ಮತ್ತು ರಾಡಾರ್ ಇಮೇಜಿಂಗ್ ನಡೆಯುತ್ತಿದೆ. ಇದು ಕಟ್ಟಡದ ರಚನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

1947ರಿಂದ ಏನೂ ಆಗದಿರುವಾಗ ಈಗ ಅಂಥ ಆತುರ ಏನು ಎಂದು ಅಹ್ಮದಿ ಒತ್ತಿ ಹೇಳಿದರು. ವಿಚಾರಣೆಯ ಸಮಯದಲ್ಲಿ, ಶುಕ್ರವಾರದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಿರಿ ಎಂದು ನೀವು ಹೇಳಬಹುದೇ ಎಂದು ಸುಪ್ರೀಂ ಕೋರ್ಟ್ ಮೆಹ್ತಾ ಅವರಿಗೆ ಪ್ರಶ್ನಿಸಿತು. ನಾವು ಸದ್ಯಕ್ಕೆ ಅಂಥ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಮತ್ತು ಅಲ್ಲಿ ಉತ್ಖನನ ಅಥವಾ ಯಾವುದೇ ಆಕ್ರಮಣಕಾರಿ ವಿಧಾನವನ್ನು ಬಳಸುತ್ತಿಲ್ಲ ಎಂದು ಮೆಹ್ತಾ ಹೇಳಿದರು. ಹಿಂದೂ ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, ವಾರಣಾಸಿ ನ್ಯಾಯಾಲಯದ ಆದೇಶದ ಮೇಲೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್​​ನ ಆದೇಶವನ್ನು ಕಟುವಾಗಿ ವಿರೋಧಿಸಿದರು.

ಇದನ್ನೂ ಓದಿ : ಕೆನಡಾ: ಕಾರು ಕಳ್ಳರ ಹಲ್ಲೆಯಿಂದ ಭಾರತೀಯ ವಿದ್ಯಾರ್ಥಿ ದಾರುಣ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.