ಪಾಟ್ನಾ: ಬಿಹಾರ ಜನತೆಯ ಜನಾದೇಶಕ್ಕೆ ಅನುಗುಣವಾಗಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಜೆಡಿಯು ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ಬಿಹಾರ ಜನತೆಯ ಜನಾದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿ ಎಂದು ಹಿಂದೆಯೂ ಹೇಳಿದ್ದೆ. ಬೇಕಾದರೆ ಬಿಜೆಪಿ ತಮ್ಮದೇ ಅಭ್ಯರ್ಥಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಬಹುದು. ಅವರಿಗೆ ನನ್ನ ಅಭ್ಯಂತರವಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ದೆಹಲಿಯ ಏಮ್ಸ್ ಗೆ ಸ್ಥಳಾಂತರ
ಅಧಿಕಾರಕ್ಕಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು ರಾಜ್ಯದ ಜನರ ಸೇವೆಗಾಗಿ. ಮುಖ್ಯಮಂತ್ರಿ ಪದವಿ ಬಿಟ್ಟುಕೊಡಲು ನಾನು ಸಿದ್ಧ ಎಂದು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಏಳು ಶಾಸಕರಲ್ಲಿ ಆರು ಮಂದಿ ಬಿಜೆಪಿಗೆ ಪಕ್ಷಾಂತರಗೊಂಡ ಬಳಿಕ ನಿತೀಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.