ETV Bharat / bharat

ಪ.ಬಂಗಾಳ ರೇಪ್​ ಕೇಸ್​: 'ಆಕೆಯ ಮೇಲೆ ರೇಪ್​ ಆಗಿತ್ತಾ? ಗರ್ಭಿಣಿಯಾಗಿದ್ದಳೇ?' ಮಮತಾ ವಿವಾದ

author img

By

Published : Apr 11, 2022, 10:15 PM IST

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆಯೊಂದು ಇದೀಗ ವಿವಾದಿತ ರೂಪ ಪಡೆದುಕೊಂಡಿದೆ.

Mamata Banerjee's remarks
Mamata Banerjee's remarks

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿರುವ ಅಪ್ರಾಪ್ತೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಇದೀಗ ರಾಜಕೀಯ ರೂಪ ಪಡೆದುಕೊಂಡಿದೆ. ಈ ವಿಷಯವನ್ನಿಟ್ಟುಕೊಂಡು ವಿರೋಧ ಪಕ್ಷ ಬಿಜೆಪಿ ಈಗಾಗಲೇ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆಯೂ ಮತ್ತಷ್ಟು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಬಾಲಕಿ ಅತ್ಯಾಚಾರಕ್ಕೊಳಗಾಗಿದ್ದಳಾ? ಅಥವಾ ಪ್ರೇಮ ಸಂಬಂಧದ ಬಳಿಕ ಗರ್ಭಿಣಿಯಾಗಿದ್ದಳೇ? ಎಂದು ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ. ಅವಳು ಹೇಗೆ ಮೃತಪಟ್ಟಿದ್ದಾಳೆಂಬುದು ನಿಮಗೆ ಹೇಗೆ ಗೊತ್ತು? ಇದೊಂದು ಪ್ರೇಮ ಪ್ರಕರಣ ಎಂಬುದು ಮನೆಯರಿಗೂ, ಅಕ್ಕಪಕ್ಕದ ನಿವಾಸಿಗಳಿಗೂ ಗೊತ್ತಿದೆ. ನನ್ನ ಗಮನಕ್ಕೂ ಇದೆ ಬಂದಿದೆ. ಇಂತಹ ಪ್ರೇಮ ಸಂಬಂಧಕ್ಕೆ ನಾನು ಹೊಣೆಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸಾವು: ಟಿಎಂಸಿ ಮುಖಂಡನ ಪುತ್ರ ಅರೆಸ್ಟ್‌

ಪ್ರೇಮ ಪ್ರಕರಣ ತಡೆಯಲು ನನ್ನಿಂದ ಸಾಧ್ಯವಿಲ್ಲ. ಇಂತಹ ಪ್ರಕರಣ ಲಾಭ ಜಿಹಾದ್ ಮಾಡಲು ಇದು ಉತ್ತರ ಪ್ರದೇಶವಲ್ಲ. ಅದು ಅವಳ ಸ್ವಾತಂತ್ರ್ಯ. ಪ್ರಕರಣದಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ ನಾನು ಕ್ರಮ ಕೈಗೊಳ್ಳುತ್ತೇನೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಬಂಧನ ಮಾಡಲಾಗಿದೆ ಎಂದಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಅಸ್ಸೋಂ, ರಾಜಸ್ಥಾನ ಮತ್ತು ಬಿಹಾರದಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣಗಳಲ್ಲಿ ಎಷ್ಟು ಸಿಬಿಐಗೆ ನೀಡಲಾಗಿದೆ? ಇಲ್ಲಿಯವರೆಗೆ ಎಷ್ಟು ಆರೋಪಿಗಳಿಗೆ ಶಿಕ್ಷೆ ಯಾಗಿದೆ ಎಂಬುದನ್ನ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ನಾಡಿಯ ಜಿಲ್ಲೆಯ ಹಂಸಖಾಲಿ ಎಂಬಲ್ಲಿ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಲಾಗಿತ್ತು. ಇದರ ಬೆನ್ನಲ್ಲೇ ಆಕೆ ಸಾವನ್ನಪ್ಪಿದ್ದಳು. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಟಿಎಂಸಿ ನಾಯಕನ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಶವಪರೀಕ್ಷೆ ನಡೆಸದೇ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.