ಪಿಲಿಭಿತ್(ಉತ್ತರ ಪ್ರದೇಶ): ಯುವಕನಿಂದ(25) ಪದೇ ಪದೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಕ್ಕೆ ಮನನೊಂದ ನಾಲ್ಕು ಮಕ್ಕಳ ತಾಯಿಯೊಬ್ಬಳು(38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಸಂತ್ರಸ್ತೆಯ ಪತಿ ನೀಡಿದ ಲಿಖಿತ ದೂರಿನ ಮೇರೆಗೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪಕ್ಕದ ಮನ್‌ಪುರ ಗ್ರಾಮದಲ್ಲಿ ಮಾಂಸದ ಅಂಗಡಿಯನ್ನು ನಡೆಸುತ್ತಿರುವ ಆರೋಪಿ ಆಗಾಗ ನನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ನಾನು ಮೇಲಧಿಕಾರಿಗಳಿಗೆ ತಿಳಿಸಿದ್ದೆ. ಆದರೆ ನಮಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲಎಂದು ಮೃತ ಮಹಿಳೆಯ ಪತಿ ಆರೋಪಿಸಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್ಹೆಚ್ಒ ಅಚಲ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಕ್ಕಳಿಗೆ ಪೆಟ್ರೋಲ್ ಸುರಿದು ಕೊಲ್ಲಲೆತ್ನಿಸಿದ ತಾಯಿ: ಒಂದು ಮಗು ಸಾವು, ಆತ್ಮಹತ್ಯೆಗೆ ಯತ್ನಿಸಿದ ಅಮ್ಮ