ETV Bharat / bharat

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಬಲಿ - ಹರಿಯಾಣ ರಸ್ತೆ ಅಪಘಾತ

ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಕಾರು ಮತ್ತು ಟ್ರಕ್​ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ.

ಒಂದೇ ಕುಟುಂಬದ 8 ಮಂದಿ ಬಲಿ
ಒಂದೇ ಕುಟುಂಬದ 8 ಮಂದಿ ಬಲಿ
author img

By

Published : Oct 22, 2021, 11:24 AM IST

ಜಜ್ಜರ್​​ (ಹರಿಯಾಣ): ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ನಡೆದಿದೆ.

ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದುರಂತ ಘಟಿಸಿದೆ. ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಬಲಿಯಾಗಿದ್ದಾರೆ.

ಸ್ಥಳಕ್ಕೆ ಬಹದ್ದೂರ್​ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಘಟನೆ ಬಳಿಕ ಟ್ರಕ್​ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.