ETV Bharat / bharat

ಜುಲೈ 5 ರವರೆಗೆ ಕೊರೊನಾ ಲಾಕ್​ಡೌನ್​ ವಿಸ್ತರಿಸಿ ಹರಿಯಾಣ ಸರ್ಕಾರ ಆದೇಶ - ಸ್ವಿಮ್ಮಿಂಗ್​ ಪೂಲ್

ಅಂಗಡಿಗಳು,ಮಾಲ್‌ಗಳು, ಧಾರ್ಮಿಕ ಸ್ಥಳಗಳನ್ನು ಈ ಹಿಂದಿನಂತೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆಯಲು ಅನುಮತಿಸಲಾಗಿದೆ. ರೆಸ್ಟೋರೆಂಟ್​ ಮತ್ತು ಬಾರ್​ಗಳು ಬೆಳಗ್ಗೆ 10 ರಿಂದ ರಾತ್ರಿ 10 ರವರೆಗೆ ತೆರೆದಿರಲಿವೆ. ಸ್ವಿಮ್ಮಿಂಗ್​ ಪೂಲ್​ ಮತ್ತು ಸ್ಪಾಗಳನ್ನು ತೆರೆಯಲು ಅವಕಾಶ ನೀಡಿಲ್ಲ..

haryana
haryana
author img

By

Published : Jun 27, 2021, 7:33 PM IST

ಚಂಡೀಗಢ/ಹರಿಯಾಣ : ಕೆಲವು ಸಡಿಲಿಕೆಗಳೊಂದಿಗೆ ಹರಿಯಾಣ ಸರ್ಕಾರ ಲಾಕ್‌ಡೌನ್‌ನ ಜುಲೈ 5ರವರೆಗೆ ವಿಸ್ತರಿಸಿದೆ. ಜೂನ್​ 28ರ ಬೆಳಗ್ಗೆ 5 ಗಂಟೆಯಿಂದ ಜುಲೈ 5ರ ಬೆಳಗ್ಗೆ 5ವರೆಗೆ ಒಂದು ವಾರ ಮತ್ತೆ ಲಾಕ್​ಡೌನ್​ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ್​ ವರ್ಧನ್​ ತಿಳಿಸಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯಗಳನ್ನು ತೆರೆಯಲು, ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರಯೋಗಾಲಯಗಳಲ್ಲಿ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ. ಆದರೆ, ಕೋವಿಡ್​ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಕೊರೊನಾ ವೈರಸ್ ಲಾಕ್‌ಡೌನ್‌ 'ಮಹಾಮಾರಿ ಅಲರ್ಟ್-ಸುರಕ್ಷಿತ್ ಹರಿಯಾಣ (Epidemic Alert-Safe Haryana)' ಎಂದು ರಾಜ್ಯ ಸರ್ಕಾರ ಹೇಳಿದೆ. ಇನ್ನು, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿಲ್ಲ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ಇತರೆ ಇಲಾಖೆಗಳಲ್ಲಿ ಜುಲೈ 31ರವರೆಗೆ ಲಾಕ್‌ಡೌನ್​ ಮುಂದುವರಿಸಲು ಆದೇಶಿಸಲಾಗಿದೆ.

ಅಂಗಡಿಗಳು,ಮಾಲ್‌ಗಳು, ಧಾರ್ಮಿಕ ಸ್ಥಳಗಳನ್ನು ಈ ಹಿಂದಿನಂತೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆಯಲು ಅನುಮತಿಸಲಾಗಿದೆ. ರೆಸ್ಟೋರೆಂಟ್​ ಮತ್ತು ಬಾರ್​ಗಳು ಬೆಳಗ್ಗೆ 10 ರಿಂದ ರಾತ್ರಿ 10 ರವರೆಗೆ ತೆರೆದಿರಲಿವೆ. ಸ್ವಿಮ್ಮಿಂಗ್​ ಪೂಲ್​ ಮತ್ತು ಸ್ಪಾಗಳನ್ನು ತೆರೆಯಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನೂ ಒಂದು ವಾರಗಳ ಕಾಲ ಲಾಕ್​ಡೌನ್​ ವಿಸ್ತರಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.