ಚಂಡೀಗಢ : ಹರಿಯಾಣದ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ಗೆ ಆಮ್ಲಜನಕದ ಮಟ್ಟ ಕುಸಿದ ಹಿನ್ನೆಲೆ ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗೆ (ಪಿಜಿಐಎಂಇಆರ್) ಸೇರಿಸಲಾಗಿದೆ. ಮೂಲಗಳ ಪ್ರಕಾರ, ಅನಿಲ್ ವಿಜ್ಗೆ ಶ್ವಾಸಕೋಶ ತಜ್ಞರ ನೇತೃತ್ವದಲ್ಲಿ ಚಿಕತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕಿರಿಯ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರು ಕಳೆದ ವಾರ ರೋಹ್ಟಕ್‌ಗೆ ಹೋಗಿದ್ದರು. ಆ ಸಮಯದಲ್ಲಿ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದ್ದರಿಂದ ಉಸಿರಾಟದಲ್ಲಿ ಏರಿಳಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಮನೋಹರಲಾಲ್ ಖಟ್ಟರ್, ಆಸ್ಪತ್ರೆಗೆ ಭೇಟಿ ನೀಡಿ ವಿಜ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಅನಾರೋಗ್ಯದ ಕಾರಣಗಳಿಂದಾಗಿ ಅನಿಲ್ ವಿಜ್ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನವನ್ನು ತಪ್ಪಿಸಿಕೊಂಡಿದ್ದರು. ಅವರು ಕಳೆದ ವರ್ಷ ಕೋವಿಡ್ಗೆ ತುತ್ತಾಗಿ, ಸುಮಾರು ಒಂದು ತಿಂಗಳು ಆಸ್ಪತ್ರೆಯಲ್ಲಿದ್ದರು.
ಇದನ್ನೂ ಓದಿ: ಈ ಕಾರಣಕ್ಕಾಗಿಯೇ ದೇಶದಲ್ಲಿ CAA ಜಾರಿ ಅಗತ್ಯ : ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ