ETV Bharat / bharat

ಹರಿಯಾಣ ಹಿಂಸಾಚಾರ: ನುಹ್ ಎಸ್​ಪಿ ವರುಣ್ ಸಿಂಗ್ಲಾ ವರ್ಗಾವಣೆ: ನೂತನ SP ಆಗಿ ನರೇಂದರ್ ಬಿಜರ್ನಿಯಾ ನೇಮಕ

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಬಳಿಕ ರಾಜ್ಯ ಸರ್ಕಾರವು ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Haryana violence
ವರುಣ್ ಸಿಂಗ್ಲಾ
author img

By

Published : Aug 4, 2023, 12:00 PM IST

ಹರಿಯಾಣ : ಜುಲೈ 31ರ ಸೋಮವಾರದಂದು ಹರಿಯಾಣದ ನುಹ್‌ನಲ್ಲಿ ನಡೆದ ಬ್ರಜ್ ಮಂಡಲ್ ಯಾತ್ರೆಯಲ್ಲಿ ಎರಡು ಗುಂಪುಗಳ ನಡುವೆ ಉಂಟಾದ ಹಿಂಸಾತ್ಮಕ ಘರ್ಷಣೆ ಬಳಿಕ ನುಹ್ (ಎಸ್​ಪಿ) ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಐಪಿಎಸ್ ನರೇಂದರ್ ಬಿಜರ್ನಿಯಾ ಈಗ ನುಹ್ ಜಿಲ್ಲೆಯ ಪೂರ್ಣಾವಧಿ ಎಸ್​ಪಿಯಾಗಲಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 176 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ 93 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಮಧ್ಯೆ, ಹರಿಯಾಣ ಸರ್ಕಾರ ದೊಡ್ಡ ಕ್ರಮ ಕೈಗೊಂಡಿದ್ದು, ನುಹ್ ಎಸ್​ಪಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿದೆ. ವರುಣ್ ಸಿಂಗ್ಲಾ ಅವರನ್ನು ಭಿವಾನಿಗೆ ಕಳುಹಿಸಲಾಗಿದ್ದು, ಭಿವಾನಿಯ ಎಸ್​ಪಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ವರುಣ್ ಸಿಂಗ್ಲಾ ಅವರು ಬ್ರಜ್ ಮಂಡಲ್ ಯಾತ್ರೆಗೂ ಮುನ್ನ ರಜೆಯ ಮೇಲೆ ತೆರಳಿದ್ದರು. ಈ ಸಮಯದಲ್ಲಿ ಭಿವಾನಿಯ ಐಪಿಎಸ್ ಅಧಿಕಾರಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ಜಿಲ್ಲೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ನರೇಂದ್ರ ಬಿಜರ್ನಿಯಾ ಅವರು ಈ ಹಿಂದೆಯೂ ಕೂಡ ನುಹ್ ಜಿಲ್ಲೆಯ ಎಸ್​ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಏನಿದು ವಿವಾದ : ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ನಡೆಸಿದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿತ್ತು. ಈ ವೇಳೆ, 2 ಪೊಲೀಸರು ಸೇರಿದಂತೆ 6 ಜನರು ಸಾವನ್ನಪ್ಪಿದರು. ಹಿಂಸಾತ್ಮಕ ಘರ್ಷಣೆಯ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 5 ರವರೆಗೆ ಇಂಟರ್​ನೆಟ್​ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರ : ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಲು ಅಮೆರಿಕದ​ ಸರ್ಕಾರದ ಮನವಿ

ಇನ್ನೊಂದೆಡೆ, ಇಂದು ನುಹ್ ಜಿಲ್ಲೆಯಲ್ಲಿ ಮತ್ತೊಮ್ಮೆ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇಂದು ಮಧ್ಯಾಹ್ನ 12:00 ರಿಂದ 3:00 ರವರೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಾಂತಿ ಸ್ಥಾಪನೆಗಾಗಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ನಿರಂತರವಾಗಿ ಸಂಚರಿಸುತ್ತಿದ್ದಾರೆ.

ಇದನ್ನೂ ಓದಿ : ಹರಿಯಾಣ ಘರ್ಷಣೆಗೆ 6 ಸಾವು, 116 ಮಂದಿ ಬಂಧನ; ಶಾಂತಿ ಕಾಪಾಡಲು ಸಿಎಂ ಖಟ್ಟರ್​ ಮನವಿ

ಸುದ್ದಿಗಾರರ ಜೊತೆ ಮಾತನಾಡಿದ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು, " ಹಿಂಸಾಚಾರವನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯದ ಕುರಿತು ಟೀಕಿಸಿದ್ದಾರೆ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. "ನುಹ್‌ನಲ್ಲಿನ ಗಲಭೆಗಳನ್ನು ತಡೆಯಲು ಸರ್ಕಾರ ಏಕೆ ವಿಫಲವಾಗಿದೆ ಎಂಬುದರ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಈ ತನಿಖೆಯಿಂದ ಸತ್ಯವನ್ನು ಹೊರತರಲು ಸಹಾಯ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಸಾವು: ಶಾಲಾ - ಕಾಲೇಜು ಬಂದ್, ಇಂಟರ್ನೆಟ್ ಸೇವೆ ಸ್ಥಗಿತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.