ETV Bharat / bharat

ದ್ವೇಷ ಭಾಷಣ ಕೇಸ್​: ಎಸ್​ಪಿ ನಾಯಕ ಆಜಂ​ ಖಾನ್​ ಧ್ವನಿ ಮಾದರಿ ನೀಡುವ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ - ಅಜಂ ಖಾನ್​ ಧ್ವನಿ ಮಾದರಿ ನೀಡಲು ಆದೇಶ

ಸಮಾಜವಾದಿ ಪಕ್ಷದ ನಾಯಕ ಆಜಂ​ ವಿರುದ್ಧ ದಾಖಲಾದ ದ್ವೇಷ ಭಾಷಣ ಪ್ರಕರಣಕ್ಕೆ ಸುಪ್ರೀಂಕೋರ್ಟ್​ ಮಧ್ಯಂತರ ತಡೆ ನೀಡಿದೆ.

ದ್ವೇಷ ಭಾಷಣ ಕೇಸ್
ದ್ವೇಷ ಭಾಷಣ ಕೇಸ್
author img

By ETV Bharat Karnataka Team

Published : Aug 23, 2023, 2:05 PM IST

ನವದೆಹಲಿ: ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಸಚಿವ ಆಜಂ ಖಾನ್​ಗೆ ಸುಪ್ರೀಂಕೋರ್ಟ್​ ಬಿಗ್​ ರಿಲೀಫ್​ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ವನಿ ಮಾದರಿಯನ್ನು ನೀಡಲು ಸೂಚಿಸಿದ್ದ ವಿಚಾರಣಾ ಕೋರ್ಟ್​ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಎ. ಎಸ್ ಬೋಪಣ್ಣ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ಆಜಂ ಖಾನ್ ಅವರ ಮನವಿಯನ್ನು ಪುರಸ್ಕರಿಸಿದ್ದು, ದ್ವೇಷ ಭಾಷಣ ಮಾಡಿದ ಧ್ವನಿ ಮಾದರಿ ನೀಡುವ ಕೋರ್ಟ್​ ಆದೇಶಕ್ಕೆ ತಡೆ ನೀಡಿ, ಉತ್ತರ ಪ್ರದೇಶ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವೇನು?: 2007 ರಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ವಿರುದ್ಧ ಎಸ್​ಪಿ ಹಿರಿಯ ನಾಯಕ ಆಜಂಖಾನ್​ ಅವರು ಅವಹೇಳನಕಾರಿ ಭಾಷೆ ಬಳಸಿ ದ್ವೇಷ ಭಾಷಣ ಮಾಡಿದ ಆರೋಪದ ಪ್ರಕರಣ ದಾಖಲಾಗಿದೆ. ಇದರ ವಿಚಾರಣೆ ನಡೆಸಿದ್ದ ವಿಚಾರಣಾ ಕೋರ್ಟ್​, ಇದಕ್ಕೆ ಸಂಬಂಧಿಸಿದಂತೆ ಧ್ವನಿ ಮಾದರಿಯನ್ನು ನೀಡಲು ಸೂಚಿಸಿತ್ತು. ಇದನ್ನು ಅಲಹಾಬಾದ್ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು.

ಇದನ್ನು ಪ್ರಶ್ನಿಸಿದ ಆಜಂ ಖಾನ್​ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೀಗ ಕೋರ್ಟ್​ ಪುರಸ್ಕರಿಸಿದ್ದು, 2007ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದ ಧ್ವನಿ ಮಾದರಿ ನೀಡುವ ಆದೇಶಕ್ಕೆ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಆಜಂ ಖಾನ್​ ಅವರ ವಿರುದ್ಧ ಕೇಸ್​ನಲ್ಲಿ ಮಧ್ಯಪ್ರವೇಶಿಸಿ, ವಿಚಾರಣಾ ಕೋರ್ಟ್​ ನೀಡಿದ ಆದೇಶವನ್ನು ರದ್ದು ಮಾಡಬೇಕು ಎಂದು ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್​ ಸಿಬಲ್​ ಅವರು ನ್ಯಾಯಮೂರ್ತಿಗಳಾದ ಎ.ಎಸ್ ಬೋಪಣ್ಣ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠದ ಮುಂದೆ ಕೋರಿದರು. ಆದರೆ, ವಿಚಾರಣೆಯಲ್ಲಿ ಮಧ್ಯಪ್ರವೇಶಿಸಲು ಪೀಠ ನಿರಾಕರಿಸಿತು.

ಸಾರ್ವಜನಿಕ ಸಭೆಯೊಂದರಲ್ಲಿ ಮಾಡಲಾದ ಭಾಷಣವನ್ನು ರೆಕಾರ್ಡ್ ಮಾಡಲಾಗಿದ್ದು, ಅದರಲ್ಲಿ ಆಜಂ ಖಾನ್ ಅವರ ದ್ವೇಷ ಭಾಷಣವಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಧ್ವನಿ ಮಾದರಿಯನ್ನು ಕೋರಲಾಗಿದೆ. ದ್ವೇಷ ಭಾಷಣ ಮಾಡಿದ್ದರ ವಿರುದ್ಧ ಧೀರಜ್ ಕುಮಾರ್ ಶೀಲ್ ಎಂಬಾತ ಆಜಂ ಖಾನ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ಹಿಂದೆ ಸಮಾಜವಾದಿ ಪಕ್ಷದ ಅಧಿಕಾರ ಕಳೆದುಕೊಂಡ ಬಳಿಕ ಆಜಂ ಖಾನ್​ ಮತ್ತು ಅವರ ಕುಟುಂಬದವರ ವಿರುದ್ಧ ಭೂಕಬಳಿಕೆ, ದ್ವೇಷ ಭಾಷಣ ಸೇರಿದಂತೆ 80ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಾಗಿವೆ.

ಇದನ್ನೂ ಓದಿ: ಆಸ್ತಿ ವಿವಾದ: ಧಾರವಾಡದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.