ಮುಂಬೈ : ಇವಿಎಂ ಮೇಲೆ ಸಂಪೂರ್ಣ ನಂಬಿಕೆಯಿದ್ದು, ರಾಜ್ಯ ಸರ್ಕಾರ ಬ್ಯಾಲೆಟ್ ಪೇಪರ್ ಬಳಸಲು ಮುಂದಾಗುವುದಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ, ಕಾಂಗ್ರೆಸ್, ಎನ್‌ಸಿಪಿ ಸೇರಿದಂತೆ ಹಲವು ಬಿಜೆಪಿಯೇತರ ಪ್ರತಿಪಕ್ಷಗಳು ಇವಿಎಂನ ವಿಶ್ವಾಸಾರ್ಹತೆ ಕುರಿತು ಅನುಮಾನ ವ್ಯಕ್ತಪಡಿಸಿದ್ದವು. ಆದರೆ, ಎನ್‌ಸಿಪಿ ಮುಖಂಡ ಅಜಿತ್ ಪವಾರ್, ಎವಿಎಂ ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಅವರು (ಇತರ ಪಕ್ಷಗಳು) ಸೋಲುವ ಭೀತಿಯಿಂದ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಓದಿ : ರಾಜ್ಯಪಾಲರಿಗೆ ವಿಮಾನ ಹತ್ತಲು ಬಿಡದ ಅಧಿಕಾರಿಗಳು..!
ಇತ್ತೀಚೆಗೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ನಾನಾ ಪಟೋಲೆ ಅವರು, ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂಗಳ ಹೊರತಾಗಿ ಮತದಾರರಿಗೆ ಮತಪತ್ರಗಳನ್ನು ಬಳಸುವ ಆಯ್ಕೆಯನ್ನು ನೀಡುವ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಇವಿಎಂ ವಿಶ್ವಾಸಾರ್ಹತೆಯ ಕುರಿತು ಹಲವು ದೂರುಗಳು ಕೇಳಿ ಬಂದ ಹಿನ್ನೆಲೆ, ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್ ಆಗಿದ್ದ ವೇಳೆ ಪಟೋಲೆ ಸೂಚನೆ ನೀಡಿದ್ದರು. ಪಟೋಲೆ ಸೂಚನೆಯ ಕುರಿತು ಕೇಳಿದಾಗ ಪ್ರತಿಕ್ರಿಯಿಸಿದ ಪವಾರ್, ಪ್ರತಿಯೊಬ್ಬ ವ್ಯಕ್ತಿಗೂ ಅವರದೇ ಆದ ಸ್ವಂತ ಅಭಿಪ್ರಾಯಗಳಿರುತ್ತವೆ. ಪಟೋಲೆ ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಇದು ನನ್ನ ಅಭಿಪ್ರಾಯ ಎಂದಿದ್ದಾರೆ.