ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಾರದ ಲಂಚ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ಸಚಿವರು ಮತ್ತು ತೃಣಮೂಲ ಕಾಂಗ್ರೆಸ್ನ ಮುಖಂಡರ ಜಾಮೀನು ಅರ್ಜಿಗಳಿಗೆ ಕೋಲ್ಕತ್ತಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಟಿಎಂಸಿ ಪಕ್ಷದ ಹಿರಿಯ ನಾಯಕರಾದ ಮತ್ತು ಹಿರಿಯ ಸಚಿವ ಸುಬ್ರಾತ್ ಮುಖರ್ಜಿ ಮತ್ತು ಫಿರ್ಹಾದ್ ಹಕೀಂ, ಶಾಸಕರಾದ ಮದನ್ ಮಿತ್ರಾ ಮತ್ತು ಮಾಜಿ ಸಚಿವ ಸೋವಾನ್ ಚಟರ್ಜಿ ಅವರಿಗೆ ಸಿಬಿಐನ ವಿಶೇಷ ಕೋರ್ಟ್ ಜಾಮೀನು ನೀಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋಲ್ಕತ್ತಾ ಹೈಕೋರ್ಟ್ ಜಾಮೀನಿಗೆ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ: ಲಸಿಕೆ ವಿತರಣೆ, ಆಮ್ಲಜನಕ ಉತ್ಪಾದನೆಯಲ್ಲಿ ತುರ್ತು ನೆರವಿಗೆ ಮುಂದಾಗಬೇಕಿದೆ ಕೇಂದ್ರ ಸರ್ಕಾರ
ಕಳೆದ ವಾರವಷ್ಟೇ ನಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕರಾದ ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿ, ಫಿರ್ಹಾದ್ ಹಕೀಮ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಪಶ್ಚಿಮ ಬಂಗಾಳ ರಾಜ್ಯಪಾಲರು ಅನುಮತಿ ನೀಡಿದ್ದರು.
ಏನಿದು ನಾರದಾ ಲಂಚ ಪ್ರಕರಣ..?
2016ರ ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ನಾರದ ಎಂಬ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್(ಕುಟುಕು ಕಾರ್ಯಾಚರಣೆ) ಆಪರೇಷನ್ನಲ್ಲಿ ಟಿಎಂಸಿ ನಾಯಕರು ಲಂಚ ತೆಗೆದುಕೊಳ್ಳುತ್ತಿರುವುದು ಬಯಲಾಗಿತ್ತು. ಈ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. 2017ರ ಮಾರ್ಚ್ನಲ್ಲಿ ಕೋಲ್ಕತ್ತಾ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.