ETV Bharat / bharat

Delhi Mohalla Clinic: ದೆಹಲಿ ಮೊಹಲ್ಲಾ ಕ್ಲಿನಿಕ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ - ದೆಹಲಿ ಸರ್ಕಾರದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್

Delhi Mohalla Clinic: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದೆಹಲಿ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ನ ಕಾರ್ಯವೈಖರಿ ಅರ್ಥಮಾಡಿಕೊಳ್ಳಲು ಪಂಚಶೀಲ್ ಪಾರ್ಕ್‌ನಲ್ಲಿರುವ ಮೊಹಲ್ಲಾ ಕ್ಲಿನಿಕ್​ಗೆ ಭೇಟಿ ನೀಡಿದರು. ಈ ವೇಳೆ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರಿಗೆ ಕರ್ನಾಟಕಕ್ಕೆ ಬರುವಂತೆ ಆಹ್ವಾನವನ್ನೂ ನೀಡಿದರು.

Delhi Mohalla Clinic
ದೆಹಲಿ ಮೊಹಲ್ಲಾ ಕ್ಲಿನಿಕ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ..
author img

By

Published : Aug 4, 2023, 6:33 PM IST

Updated : Aug 4, 2023, 10:41 PM IST

ನವದೆಹಲಿ: ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಂದು ದೆಹಲಿಯ ಪಂಚಶೀಲ್ ಪಾರ್ಕ್ ಶಹಪುರ್ ಜಾಟ್‌ನಲ್ಲಿರುವ ಆಮ್ ಆದ್ಮಿ ಮೊಹಲ್ಲಾ ಕ್ಲಿನಿಕ್‌ಗೆ ಭೇಟಿ ನೀಡಿದರು. ಮೊಹಲ್ಲಾ ಕ್ಲಿನಿಕ್​ಗೆ ತೆರಳಿ ವೈದ್ಯರೊಂದಿಗೆ ಸಮಾಲೋಚಿಸಿ ಆರೋಗ್ಯ ಕೇಂದ್ರದ ವಿಶೇಷತೆಗಳನ್ನು ತಿಳಿದುಕೊಂಡರು. ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಜೊತೆಗಿದ್ದರು.

  • #WATCH मैं स्वयं मोहल्ला क्लिनिक का दौरा करना चाहता था जिससे यह देख सकूं कि यह कैसे काम कर रहा है...कर्नाटक में भी, हमारे पास इसके (मोहल्ला क्लिनिक) समान नम्मा क्लिनिक है जिसे हाल ही में शुरू किया गया है। हम यहां मॉडल की जांच करने के बाद उनमें बदलाव कर सकते हैं, इसलिए मैं यहां… https://t.co/crwQc95BEh pic.twitter.com/g9hdosFsci

    — ANI_HindiNews (@AHindinews) August 4, 2023 " class="align-text-top noRightClick twitterSection" data=" ">

ಮೊಹಲ್ಲಾ ಕ್ಲಿನಿಕ್ ಅನ್ನು ಶ್ಲಾಘಿಸಿದ ದಿನೇಶ್ ಗುಂಡೂರಾವ್, ''ಇಂದು ನಾನು ದೆಹಲಿ ಸರ್ಕಾರದ ಮೊಹಲ್ಲಾ ಕ್ಲಿನಿಕ್ ನೋಡಲು ಬಂದಿದ್ದೇನೆ. ಆರೋಗ್ಯ ಕೇಂದ್ರಗಳ ಬಗ್ಗೆ ಮೊದಲೇ ಕೇಳಿದ್ದೆ. ಆದರೆ, ಇಲ್ಲಿಗೆ ಬಂದ ನಂತರ ಆಮ್ ಆದ್ಮಿ ಮೊಹಲ್ಲಾ ಚಿಕಿತ್ಸಾಲಯ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ನೋಡಿ ಅರ್ಥ ಮಾಡಿಕೊಂಡಿದ್ದೇನೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸದು ಮಾಡುವುದನ್ನು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬೇರೆ ರಾಜ್ಯಗಳಿಂದ ಹೊಸದನ್ನು ಕಲಿತುಕೊಳ್ಳಲು ಬಂದಿದ್ದೇನೆ" ಎಂದು ತಿಳಿಸಿದ್ದಾರೆ.

''ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರನ್ನು ಕರ್ನಾಟಕಕ್ಕೆ ಬಂದು ಆರೋಗ್ಯ ಸೇವೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡಿದ್ದೇನೆ. ಅಲ್ಲಿ ಯಾವುದೇ ಪಕ್ಷದ ಸರ್ಕಾರವಿರಲಿ, ನಾವು ಪರಸ್ಪರ ರಾಜ್ಯಗಳಿಗೆ ಭೇಟಿ ನೀಡಬೇಕು. ಅಂತಹ ಭೇಟಿಗಳಿಂದ ಏನನ್ನಾದರೂ ಕಲಿಯಲು ಸಾಧ್ಯವಾಗುತ್ತದೆ'' ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸೌರಭ್ ಭಾರದ್ವಾಜ್ ಸಂತಸ: ''ದೆಹಲಿಯ ಮೊಹಲ್ಲಾ ಕ್ಲಿನಿಕ್ ನೋಡಲು ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಂದಿರುವುದು ತುಂಬಾ ಖುಷಿ ತಂದಿದೆ. ನಮಗೂ ಕರ್ನಾಟಕಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ನಾವು ಕೂಡಾ ಕರ್ನಾಟಕಕ್ಕೆ ಹೋಗುತ್ತೇವೆ. ಕರ್ನಾಟಕದಲ್ಲೂ ಅನೇಕ ಉತ್ತಮ ಆಸ್ಪತ್ರೆಗಳಿದ್ದು, ಅವು ಉತ್ತಮವಾಗಿ ಕೆಲಸ ಮಾಡುತ್ತಿವೆ'' ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದರು. ಎಲ್ಲ ರಾಜ್ಯಗಳು ಪರಸ್ಪರ ಕಲಿಯಬೇಕು ಎಂದು ನಾನು ಭಾವಿಸುತ್ತೇನೆ. ನಾವು ಖಂಡಿತವಾಗಿಯೂ ಆರೋಗ್ಯ ಕ್ಷೇತ್ರದ ಮಾದರಿಯ ಬಗ್ಗೆ ಏನನ್ನಾದರೂ ಹೊಸದನ್ನು ಕಲಿಯುತ್ತೇವೆ ಎಂದಿದ್ದಾರೆ.

ಏನಿದು ಮೊಹಲ್ಲಾ ಚಿಕಿತ್ಸಾಲಯ?: ರಾಜಧಾನಿ ದೆಹಲಿಯಲ್ಲಿ 500ಕ್ಕೂ ಹೆಚ್ಚು ಮೊಹಲ್ಲಾ ಚಿಕಿತ್ಸಾಲಯಗಳು ರೋಗಿಗಳಿಗೆ ಉಚಿತವಾಗಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡುತ್ತಿವೆ. ಮೊಹಲ್ಲಾ ಕ್ಲಿನಿಕ್​ನಲ್ಲಿ 212 ವಿವಿಧ ರೀತಿಯ ವೈದ್ಯಕೀಯ ಪರೀಕ್ಷೆಗಳು ಸೇರಿವೆ.

  • #WATCH | Karnataka Health Minister Dinesh Gundu Rao on visiting Delhi Mohalla Clinic, says, "It is not that impressive. We have such models in our state as well. There were not many people. It is not a game-changer. I am not saying it is bad, but it is not like the way it is made… pic.twitter.com/Jv65KHe4M8

    — ANI (@ANI) August 4, 2023 " class="align-text-top noRightClick twitterSection" data=" ">

ಮಾಧ್ಯಮಗಳಿಗೆ ಪ್ರತಿಕ್ರಿಯೆ: "ಇದು ಅಷ್ಟು ಪ್ರಭಾವಶಾಲಿಯಾಗಿಲ್ಲ. ನಮ್ಮ ರಾಜ್ಯದಲ್ಲೂ ಇಂತಹ ಮಾದರಿಗಳಿವೆ. ಇದು ಕೆಟ್ಟದ್ದು ಎಂದು ನಾನು ಹೇಳುತ್ತಿಲ್ಲ. ಆದರೆ, ದಕ್ಷಿಣದ ತಮಿಳುನಾಡು, ಕೇರಳ ಮತ್ತು ಕರ್ನಾಟಕದಲ್ಲಿ ಅನೇಕ ಆಸ್ಪತ್ರೆಗಳ ಮಾದರಿಗಳಿವೆ. ನಮ್ಮಲ್ಲಿಯೂ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಇವೆ. ಆದ್ದರಿಂದ ಈ ಕ್ಲಿನಿಕ್​ಗಳಲ್ಲಿ ಅಂತಹ ವಿಶೇಷ ತರಹದ ವಿಷಯವೇನಿಲ್ಲ " ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡಿದರು. ಸಚಿವ ದಿನೇಶ್ ಗುಂಡೂರಾವ್, ದೆಹಲಿ ಮೊಹಲ್ಲಾ ಕ್ಲಿನಿಕ್‌ ಭೇಟಿ ನೀಡಿದ ವೇಳೆ ಹೊಳಿದ್ದರು. ಆದ್ರೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವೇಳೆ ಕ್ಲಿನಿಕ್​ಗಳಲ್ಲಿ ಅಂತಹ ವಿಶೇಷದಿಂದ ಕೂಡಿದ ವಿಷಯವೇನಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Gyanvapi: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ; ತಡೆ ನೀಡಲು ಸುಪ್ರೀಂ ಕೋರ್ಟ್​ ನಕಾರ

Last Updated : Aug 4, 2023, 10:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.