ETV Bharat / bharat

ಯುಕೆಯಲ್ಲಿ ಹೆಚ್ಚಿದ ಕೊರೊನಾ ತೀವ್ರತೆ : ತುರ್ತು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವಾಲಯ

ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ತೀವ್ರತೆ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಮಹತ್ವದ ಸಭೆ ನಡೆಸಲಿದೆ.

ಕೇಂದ್ರ ಆರೋಗ್ಯ ಸಚಿವಾಲಯ
ಕೇಂದ್ರ ಆರೋಗ್ಯ ಸಚಿವಾಲಯಕೇಂದ್ರ ಆರೋಗ್ಯ ಸಚಿವಾಲಯ
author img

By

Published : Dec 21, 2020, 9:02 AM IST

ನವದೆಹಲಿ: ಬ್ರಿಟನ್ ಹಾಗೂ ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ತೀವ್ರತೆ ಪಡೆದುಕೊಳ್ಳುತ್ತಿದ್ದು, ಮತ್ತೆ ಹೊಸ ವೈರಸ್​ ಸಹ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಮಹತ್ವದ ಸಭೆ ನಡೆಸಲಿದೆ.

ಆರೋಗ್ಯ ಸೇವೆಗಳ ಮಹಾನಿರ್ದೇಶಕರ (ಡಿಜಿಹೆಚ್‌ಎಸ್) ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ಬ್ರಿಟನ್ ಹಾಗೂ ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ಏರಿಕೆಗೆ ಕಾರಣವೇನು ಎಂಬ ಕುರಿತು ಚರ್ಚೆ ನಡೆಸಲಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಭಾರತದಲ್ಲಿ ಕೊರೊನಾ ತೀವ್ರಗತಿಯಲ್ಲಿ ಏರಿಕೆ ಕಂಡಿಲ್ಲ. ಆದರೆ ನಾವು ಜಗತ್ತಿಗೆ ಸಂಬಂಧಿಸಿದ ಯಾವುದೇ ಘಟನೆಗಳ ಬಗ್ಗೆ ನಿಗಾ ಇಡುತ್ತೇವೆ"ಎಂದು ಅಧಿಕಾರಿಗಳು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.