ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದ ವಿಚಾರಣೆಯನ್ನು ಮೇ 19ರವರೆಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮುಂದೂಡಿದೆ.
ಜನವರಿ 17, 2014ರ ರಾತ್ರಿ ದೆಹಲಿಯ ಹೋಟೆಲ್ ಒಂದರಲ್ಲಿ ಸುನಂದಾ ಪುಷ್ಕರ್ ನಿಗೂಢವಾಗಿ ಮೃತಪಟ್ಟಿದ್ದರು. ಶಶಿ ತರೂರ್ ಹಾಗೂ ಪತ್ನಿ ಸುನಂದಾ ಪುಷ್ಕರ್ ತಮ್ಮ ಮನೆ ನವೀಕರಣಗೊಳ್ಳುತ್ತಿದ್ದ ಹಿನ್ನೆಲೆ ಹೋಟೆಲ್‌ನಲ್ಲಿ ತಂಗಿದ್ದರು.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 (ಆತ್ಮಹತ್ಯೆ) ಮತ್ತು 498 ಎ (ಪತಿ ಅಥವಾ ಅವನ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು) ಅಡಿಯಲ್ಲಿ ತರೂರ್ ವಿರುದ್ಧ ಆರೋಪ ಹೊರಿಸಲಾಗಿದೆ.
ದೆಹಲಿ ಪೊಲೀಸರು ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಶಶಿ ತರೂರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.
ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ಸ್ಥಾಪಿಸಲು ಯಾವುದೇ ಪುರಾವೆಗಳಿಲ್ಲ ಮತ್ತು ನನ್ನ ವಿರುದ್ಧ ಆರೋಪಗಳನ್ನು ಹೊರಿಸಿದರೆ ಅದು ಕಾನೂನಿಗೆ ವಿರುದ್ಧವಾಗಿರುತ್ತದೆ ಎಂದು ಶಶಿ ತರೂರ್ ಅವರು ಹೇಳಿದ್ದರು.