ಪಾಟ್ನಾ (ಬಿಹಾರ): ಬಿಹಾರದಲ್ಲಿ ಜಾತಿ ಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಪಾಟ್ನಾ ಹೈಕೋರ್ಟ್‌ನ ಮಧ್ಯಂತರ ತಡೆಯನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜಾತಿ ಗಣತಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್, ಜುಲೈ 3ರಂದು ವಿಚಾರಣೆ ನಿಗದಿಪಡಿಸಿದೆ. ಇದನ್ನು ವಿರೋಧಿಸಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ: ವಿದ್ಯಾರ್ಥಿ ದೆಸೆಯಿಂದಲೇ ಸಂಘಟನಾ ಚತುರ.. ಬಂಡೆಯಂತೆ ನಿಂತು ಕಾಂಗ್ರೆಸ್ ಗೆಲ್ಲಿಸಿದ ಡಿಕೆಶಿ ರಾಜಕೀಯ ಹಾದಿ
ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿರುವ ಪಾಟ್ನಾ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಬಿಹಾರ ರಾಜ್ಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ಕೈಗೆತ್ತಿಕೊಂಡಿತ್ತು. ಆದರೆ, ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಎಸ್ ಓಕಾ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿತು. ಇದೇ ವೇಳೆ ಜುಲೈ 3 ರಂದು ಹೈಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿರುವುದರಿಂದ ಅರ್ಜಿ ವಿಚಾರಣೆಯನ್ನು ಬಾಕಿ ಉಳಿಸಿಕೊಂಡಿರುವುದಾಗಿ ಹೇಳಿತು. ರಿಟ್ ಅರ್ಜಿಯನ್ನು ಹೈಕೋರ್ಟ್ ಕೈಗೆತ್ತಿಕೊಳ್ಳದಿದ್ದರೆ ಜುಲೈ 14 ರಂದು ನಿಮ್ಮ ವಾದವನ್ನು ಪರಿಗಣಿಸುವುದಾಗಿ ಬಿಹಾರ ಸರ್ಕಾರಕ್ಕೆ ಪೀಠ ಹೇಳಿದೆ.
ನಿನ್ನೆ ಈ ಅರ್ಜಿಯ ವಿಚಾರಣೆ ಪ್ರಸ್ತಾಪ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರನ್ನೊಳಗೊಂಡ ಪೀಠದ ಮುಂದೆ ಬಂದಾಗ, ನ್ಯಾಯಮೂರ್ತಿ ಕರೋಲ್ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು. ಏಕೆಂದರೆ ಅವರು ಈ ಹಿಂದೆ ಬಿಹಾರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದರಿಂದ ಅವರು ಪೀಠದಿಂದ ಹಿಂದೆ ಸರಿದಿದ್ದರು.
ಜಾತಿ ಗಣತಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ: ಬಿಹಾರ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಸಂಬಂಧಿತ ಪೀಠವು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಮುಂದೆ ಪಟ್ಟಿ ಮಾಡಲಾಗಿತ್ತು. ಕರೋಲ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದರಿಂದ ಹೊಸ ದ್ವಿಸದಸ್ಯ ಪೀಠ ರಚಿಸಿತ್ತು. ನ್ಯಾಯಮೂರ್ತಿ ಅಭಯ್ ಓಕ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನ್ಯಾಯ ಪೀಠ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತಾದರೂ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು. ಅಷ್ಟೇ ಅಲ್ಲದೇ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿತು.
ಇದನ್ನೂ ಓದಿ: ಮುಜಾಫರ್‌ಪುರದ ಲಿಚ್ಚಿ ಹಣ್ಣು ಸವಿಯಲಿರುವ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ
ಜಾತಿ ಗಣತಿಗೆ ಪಾಟ್ನಾ ಹೈಕೋರ್ಟ್ ತಡೆ: ಜಾತಿ ಆಧಾರಿತ ಗಣತಿ ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪಾಟ್ನಾ ಹೈಕೋರ್ಟ್, ಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಇದು ಜನರ ಖಾಸಗಿತನದ ಉಲ್ಲಂಘನೆ ಎಂದೂ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಲಾಗಿತ್ತು. ಈ ಸಂಬಂಧ ವಾದ - ಪ್ರತಿವಾದ ಆಲಿಸಿದ್ದ ಕೋರ್ಟ್, ಜಾತಿ ಗಣತಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಜುಲೈ 3ಕ್ಕೆ ವಿಚಾರಣೆ ನಿಗದಿಪಡಿಸಿತ್ತು.
ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಮಾನ್ಯತೆ, ಲೈಂಗಿಕ ಅಲ್ಪಸಂಖ್ಯಾತರ ರಕ್ಷಣೆ ವಿಚಾರ: ರಾಷ್ಟ್ರಪತಿಗೆ ಪತ್ರ ಬರೆದ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ