ಮಲಪ್ಪುರಂ (ಕೇರಳ): ಕಳೆದ ಕೆಲವು ದಿನಗಳಿಂದ ಕೇರಳದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲಪ್ಪುರಂನಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಅಸು ನೀಗಿದ್ದಾರೆ.
ಮಲಪ್ಪುರಂ ಜಿಲ್ಲೆಯ ಕರಿಪುರದ ಮಠಮ್ಕುಲಂ ಎಂಬಲ್ಲಿ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಮನೆಯೊಳಗಿದ್ದ ಆರು ತಿಂಗಳ ಹೆಣ್ಣು ಮಗು ಮತ್ತು ಆಕೆಯ ಎಂಟು ವರ್ಷದ ಸಹೋದರಿ ಸಾವನ್ನಪ್ಪಿದ್ದಾರೆ. ಪಕ್ಕದಲ್ಲೇ ನಿರ್ಮಾಣ ಹಂತದಲ್ಲಿದ್ದ ಮನೆಯೊಂದು ಕುಸಿದು ಈ ಮನೆ ಮೇಲೆ ಬಿದ್ದಿದ್ದು, ಪರಿಣಾಮ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಮನೆ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದುರಂತ
ಅಕ್ಟೋಬರ್ 11 ರಿಂದ ಅಕ್ಟೋಬರ್ 15 ರವರೆಗೆ ಕೇರಳ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲ ಪ್ರದೇಶಗಳಲ್ಲಿ ಜೋರಾಗಿ ಸುರಿಯುತ್ತಿದ್ದ ವರುಣ, ನಿನ್ನೆ ರಾತ್ರಿಯಿಂದ ತನ್ನ ಅಬ್ಬರವನ್ನು ಹೆಚ್ಚಿಸಿದ್ದಾನೆ.