ನವದೆಹಲಿ: ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದು, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಸೆಪ್ಟೆಂಬರ್ 23 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಉಂಟಾಗಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ತೀರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡ, ಸೌರಾಷ್ಟ್ರ, ಕಚ್ ಪ್ರದೇಶಗಳಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣಾರ್ಭಟ ಮುಂದುವರಿಯಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಇದನ್ನೂ ಓದಿ: Video: ಚಲಿಸುತ್ತಿದ್ದ ಟ್ರೈನ್ ಹತ್ತಲು ಹೋಗಿ ರೈಲಿನಡಿ ಸಿಲುಕಿದ ಮಹಿಳೆ.. ಕೂದಲೆಳೆ ಅಂತರದಲ್ಲಿ ಬಚಾವ್