ಅಹಮದಾಬಾದ್(ಗುಜರಾತ್): ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ ಸುಮಾರು 400 ಕೋಟಿ ರೂಪಾಯಿ ಮೌಲ್ಯದ 77 ಕೆ.ಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣ ಸಂಬಂಧ 6 ಜನರನ್ನು ಬಂಧಿಸಲಾಗಿದೆ ಎಂದು ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಗುಜರಾತ್ ಕರಾವಳಿಯಲ್ಲಿ ಭಾನುವಾರ ರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ, 6 ಜನರಿದ್ದ ಪಾಕಿಸ್ತಾನದ ಮೀನುಗಾರಿಕಾ ದೋಣಿ 'ಅಲ್ ಹುಸೇನಿ' ಅನ್ನು ವಶಪಡಿಸಿಕೊಂಡಿದೆ ಎಂದು ಗುಜರಾತ್‌ನ ರಕ್ಷಣಾ ಸಾರ್ವಜನಿಕ ಸಂಪರ್ಕಾಧಿಕಾರಿ(PRO) ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಮಾದಕ ವಸ್ತುಗಳಿದ್ದ ದೋಣಿಯನ್ನು ಗುಜರಾತ್‌ನ ಕಚ್ ಜಿಲ್ಲೆಯ ಜಖೌಗೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್ ಕಾರ್ಯಾಚರಣೆ ನಡೆಸಿ 8 ಪಾಕಿಸ್ತಾನಿ ಪ್ರಜೆಗಳಿದ್ದ ಬೋಟ್‌ನಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ 30 ಕೆ.ಜಿ ಹೆರಾಯಿನ್ ಅನ್ನು ಕಚ್‌ನ ಜಖೌ ಕರಾವಳಿಯ ಬಳಿ ವಶಕ್ಕೆ ಪಡೆದಿದ್ದರು.
ಕಳೆದ ತಿಂಗಳು(ನವೆಂಬರ್) ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯಿಂದ ಸುಮಾರು 600 ಕೋಟಿ ರೂ.ಮೌಲ್ಯದ ಹೆರಾಯಿನ್ಅನ್ನು ಎಟಿಎಸ್ ವಶಪಡಿಸಿಕೊಂಡಿತ್ತು. ಪಾಕಿಸ್ತಾನಿ ಡ್ರಗ್ ಡೀಲರ್‌ಗಳು ಅರೇಬಿಯನ್ ಸಮುದ್ರದ ಮೂಲಕ ತಮ್ಮ ಭಾರತೀಯ ಸಹವರ್ತಿಗಳಿಗೆ ರವಾನಿಸುತ್ತಿದ್ದರು ಎಂದು ಎಟಿಎಸ್ ಹೇಳಿದೆ.
ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಭಾರತದಲ್ಲಿನ ಅತಿದೊಡ್ಡ ಹೆರಾಯಿನ್ ಸಾಗಣೆ, ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಸುಮಾರು 3,000 ಕೆ.ಜಿ ಡ್ರಗ್ ಅನ್ನು ಕಚ್‌ನ ಮುಂದ್ರಾ ಬಂದರಿನಲ್ಲಿ ವಶಪಡಿಸಿಕೊಂಡಿದೆ. ಇದು ಅಫ್ಘಾನಿಸ್ತಾನದಿಂದ ಬಂದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಇದರ ಮೌಲ್ಯ 21,000 ಕೋಟಿ ರೂ. ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ₹9,000 ಕೋಟಿ ಮೌಲ್ಯದ ಹೆರಾಯಿನ್ ವಶ