ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದಿದ್ದು, ಸುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಿಮನದಿ ಒಡೆದ ಕಾರಣ ದೌಲಿಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಉಂಟಾಗಿದ್ದು, ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಜೋಶಿಮಠದಲ್ಲಿ ನಡೆಯುತ್ತಿರುವ ರೈಲ್ವೆ ನಿರ್ಮಾಣ ಕಾಮಗಾರಿ ಸೇರಿದಂತೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ. ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರ ಹಾಗೂ ಗಂಗಾ ತೀರಕ್ಕೆ ಹೋಗದಂತೆ ಜನರಿಗೆ ಚಮೋಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ದೆಹಲಿ ಮೆಟ್ರೋ ನಿಲ್ದಾಣದ ಬಳಿ ಕೊಳಗೇರಿಯಲ್ಲಿ ಬೆಂಕಿ ಅವಘಡ: ಗುಡಿಸಲುಗಳು ಅಗ್ನಿಗಾಹುತಿ
ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗುವ ಸಾಧ್ಯತೆ ಹೆಚ್ಚಿದ್ದು, ಅಣೆಕಟ್ಟು ಬಳಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ತಂಡವು ಬೀಡುಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌ಡಿಆರ್‌ಎಫ್ ತಂಡ ಕೂಡ ಗ್ರಾಮಕ್ಕೆ ಆಗಮಿಸಿದೆ.