ETV Bharat / bharat

ಬಾಬರಿ ಮಸೀದಿ ಪ್ರಕರಣ: ಸುಪ್ರೀಂ ವಿರುದ್ಧ ಘೋಷಣೆ ಲಘುವಾಗಿ ಪರಿಗಣಿಸುವುದಿಲ್ಲ- ಹೈಕೋರ್ಟ್

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗಿದ ಮಂಗಳೂರಿನ ಆರೋಪಿ ಸಫ್ವಾನ್ ಅವರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸದಸ್ಯನ ವಿರುದ್ಧ ಇದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಆದರೆ ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗುವುದು ಸಮುದಾಯಗಳ ನಡುವೆ ದ್ವೇಷವನ್ನು ಬಿತ್ತುವುದನ್ನು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದೆ.

High Court quashed the case against CFI
ಬಾಬರಿ ಮಸೀದಿ ಪ್ರಕರಣ
author img

By

Published : Nov 1, 2022, 12:04 PM IST

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗಿದ ಆರೋಪಿ ಸಫ್ವಾನ್ ಅವರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸದಸ್ಯನ ವಿರುದ್ಧ ಇದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಬಾಬರಿ ಮಸೀದಿ ಪ್ರಕರಣದಲ್ಲಿ ಐಪಿಸಿಯ ಸೆಕ್ಷನ್ 153 ಎ ರೊಳಗೆ ವ್ಯಕ್ತಿಯ ವಿರುದ್ಧ ಆರೋಪ ಹೊರಿಸುವ ಮೊದಲು ಪೊಲೀಸ್ ಇಲಾಖೆ ಸರಕಾರದ ಅನುಮತಿ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಈ ಪ್ರಕರಣವನ್ನು ರದ್ದುಪಡಿಸಲಾಗಿದೆ. ಆದರೆ ಹೈಕೋರ್ಟ್​, ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗುವುದು ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತದೆ, ಅದನ್ನು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದೆ.

ಆರೋಪಿ ಸಫ್ವಾನ್ ಅವರು, ಸಿಎಫ್‌ಐ ಬ್ಯಾನರ್‌ಸಹಿತ ಇತರರೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಬಳಿ ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದರು. ಆದರೆ ಇದು ಎರಡು ಗುಂಪುಗಳ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆಯೇ ಹೊರತು, ಬೇರೇನೂ ಅಲ್ಲ. ಇದು ಮಂಗಳೂರು ಭಾಗದಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂಥ ಕೃತ್ಯ. ಆರೋಪಿಗಳು ತೀರ್ಪಿನ ವಿರುದ್ಧ ವ್ಯಕ್ತಪಡಿಸಿದ ಆಕ್ರೋಶವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ದಂಡ ಸಂಹಿತೆಯ 149 ವಿಧಿ, ಕರ್ನಾಟಕ ಸ್ಪೇಸ್ ಡಿಸ್ಫಿಗರ್ಮೆಂಟ್ ಆಕ್ಟ್ ಸೆಕ್ಷನ್ 3 ರೊಂದಿಗೆ ಸೆಕ್ಷನ್ 153 ಎ ಅಡಿ ಸಫ್ವಾನ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಐಪಿಸಿಯ 153ಎ ವಿಧಿಯಂತೆ, "ಯಾವುದೇ ಪೂಜಾ ಸ್ಥಳದಲ್ಲಿ ಅಥವಾ ಧಾರ್ಮಿಕ ಪೂಜಾ ಅಥವಾ ಧಾರ್ಮಿಕ ಸಮಾರಂಭಗಳಲ್ಲಿ ಅಪರಾಧ ಮಾಡುವವರಿಗೆ ದಂಡ ಹಾಗೂ ಐದು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು. ಆದರೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 196 ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲು ಸರ್ಕಾರದ ಅನುಮತಿ ಅಗತ್ಯ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ನಕಲಿ ಅಂಕಪಟ್ಟಿ ಸಲ್ಲಿಸಿ ಸಹಾಯಕ ಉಪನ್ಯಾಸಕರಾಗಿ ಆಯ್ಕೆ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.