ನವದೆಹಲಿ: ಕಳೆದ ಹತ್ತು ದಿನಗಳಿಂದ ನಡೆದಿದ್ದ ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಮೇಲಿನ ವಿಚಾರಣೆಯ ತೀರ್ಪನ್ನು ಸದ್ಯ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಆದೇಶ ಎತ್ತಿಹಿಡಿದಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡುವ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಎತ್ತಿಹಿಡಿದಿತ್ತು.
-
#UPDATE | Supreme Court reserves order on various petitions challenging Karnataka High Court upholding the ban on #Hijab in educational institutes https://t.co/czaBHxQ7sr
— ANI (@ANI) September 22, 2022 " class="align-text-top noRightClick twitterSection" data="
">#UPDATE | Supreme Court reserves order on various petitions challenging Karnataka High Court upholding the ban on #Hijab in educational institutes https://t.co/czaBHxQ7sr
— ANI (@ANI) September 22, 2022#UPDATE | Supreme Court reserves order on various petitions challenging Karnataka High Court upholding the ban on #Hijab in educational institutes https://t.co/czaBHxQ7sr
— ANI (@ANI) September 22, 2022
ಹಿಜಾಬ್ ಧರಿಸಿದ ಕಾರಣಕ್ಕೆ ತರಗತಿಗಳಿಗೆ ಹಾಜರಾಗಲು ಅನುಮತಿ ನಿರಾಕರಿಸಿದ ನಂತರ ಅರ್ಜಿದಾರರು ಅಂದರೆ ಕರ್ನಾಟಕದ ವಿವಿಧ ಕಾಲೇಜುಗಳ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೊರೆ ಹೋಗಿದ್ದರು.