ಕೇರಳ: ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ತೀವ್ರ ವಿವಾದದ ಹಿನ್ನೆಲೆಯಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಹಿಜಾಬ್ ಇಸ್ಲಾಂ ಧರ್ಮದ ಆಚರಣೆಯಲ್ಲಿ ಅಂತರ್ಗತವಾಗಿಲ್ಲ ಎಂದು ಹೇಳಿದ್ದಾರೆ.
'ಮಹಿಳೆಯರು ಧರಿಸುವ ಹಿಜಾಬ್ ಬಗ್ಗೆ ಕುರಾನ್‌ನಲ್ಲಿ 7 ಬಾರಿ ಉಲ್ಲೇಖವಿದೆ. ಆದ್ರೆ ಇದು ಇಸ್ಲಾಂಗೆ ಅವಶ್ಯವಾದ ಅಥವಾ ಅನಿವಾರ್ಯವಾದ ವಿಚಾರವಲ್ಲ' ಎಂದು ಅವರು ವಿಶೇಷ ಸಂದರ್ಶನದಲ್ಲಿ ತಿಳಿಸಿದರು.
ಪಟ್ಟಭದ್ರ ಹಿತಾಸಕ್ತಿಗಳು ಯುವ ಮುಸ್ಲಿಂ ಮಹಿಳೆಯರನ್ನು ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟಿಸಲು ಪ್ರಚೋದಿಸುತ್ತಿವೆ. ಇಂಥವರು ಮುಸ್ಲಿಂ ಮಹಿಳೆಯರನ್ನು ಅಂಧಕಾರದ ಯುಗಕ್ಕೆ ತಳ್ಳಲು ಬಯಸುತ್ತಾರೆ. ಹಾಗಾಗಿ ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ, ಓದಿನ ಕಡೆ ಗಮನಹರಿಸಿ ಎಂದು ವಿದ್ಯಾರ್ಥಿಗಳಿಗೆ ಆರಿಫ್ ಮೊಹಮ್ಮದ್ ಖಾನ್ ಮನವಿ ಮಾಡಿದರು.
ಇದನ್ನೂ ಓದಿ: ಹಿಜಾಬ್ ವಿವಾದ ನಮ್ಮ ಆಂತರಿಕ ವಿಚಾರ, ಅಭಿಪ್ರಾಯ ಹೊರಹಾಕುವುದು ಸರಿಯಲ್ಲ: ರಾಷ್ಟ್ರಗಳಿಗೆ ವಿದೇಶಾಂಗ ಇಲಾಖೆ ಸೂಚನೆ